ಶಾಲಾ-ಕಾಲೇಜುಗಳಲ್ಲಿ ನಡೆಯುವ ಅಕ್ರಮದಂಧೆಗೆ ಕಡಿವಾಣ ಹಾಕಲು ಸಚಿವರಿಗೆ ಮನವಿ ಸಲ್ಲಿಕೆ

ದಾವಣಗೆರೆ: ರಾಜ್ಯ ವ್ಯಾಪ್ತಿಯಲ್ಲಿ ಬಹುತೇಕ ಕಡೆ ಖಾಸಗಿ ಶಾಲಾ- ಕಾಲೇಜುಗಳ ವಿದ್ಯಾರ್ಥಿಗಳಿಗೆ ನೋಟ್‌ಬುಕ್‌, ಪೆನ್‌, ಪೆನ್ಸಿಲ್‌ ಸೇರಿ ಲೇಖನ ಸಾಮಗ್ರಿಗಳು ಮತ್ತು  ಶಾಲಾ ಸಮವಸ್ತ್ರ ಶೂ ಗಳು ಶಾಲೆಯಲ್ಲೇ ಮಾರುವ ಅಕ್ರಮ ದಂಧೆ ನಿಲ್ಲಿಸಲು ಹಾಗೂ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಕೋರಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಜೆಡಿಎಸ್ ರಾಜ್ಯ ಕಾರ್ಯದರ್ಶಿ ಟಿ.ಅಸ್ಗರ್ ಮನವಿ ಸಲ್ಲಿಸಿದರು.ಬೆಂಗಳೂರಿನ ಸದಶಿವ ನಗರದ ಸಚಿವ ಮಧು ಬಂಗಾರಪ್ಪ ನಿವಾಸದಲ್ಲಿ ತೆರಳಿದ ನಿಯೋಗ ತೆರಳಿ ಮನವಿ ಸಲ್ಲಿಸಿದ ನಂತರ ಮಾತನಾಡಿದ ಅವರು, ಶಾಲಾ- ಕಾಲೇಜುಗಳಲ್ಲಿ ನೋಟ್‌ಬುಕ್‌, ಪೆನ್‌, ಪೆನ್ಸಿಲ್‌ ಸೇರಿ ಲೇಖನ ಸಾಮಗ್ರಿಗಳನ್ನು ಶಾಲಾ ಸಮವಸ್ತ್ರ ಶೂ ಗಳು ಶಾಲೆಯಲ್ಲೇ ಮಾರುವುದು ನಿಯಮ ಬಾಹಿರವಾಗಿದ್ದರೂ ಇತ್ತೀಚಿನ ವರ್ಷಗಳಲ್ಲಿ ಅವ್ಯಾಹತವಾಗಿ ನಡೆಯುತ್ತಿದೆ. ಇದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕೂಡ ಅಗತ್ಯ ಕ್ರಮ ತೆಗೆದುಕೊಂಡಿಲ್ಲ ಎಂದು ಆರೋಪಿಸಿದರು.ವ್ಯಾಪಾರಸ್ಥರೊಂದಿಗೆ ಒಪ್ಪಂದ ಮಾಡಿಕೊಂಡು ಪ್ರವೇಶದ ಸಂದರ್ಭದಲ್ಲೇ ಒದಗಿಸುವುದನ್ನು ರೂಢಿಸಿಕೊಂಡಿವೆ. ನೋಟ್‌ ಪುಸ್ತಕ, ಬೈಂಡ್‌ ಕಾಗದ, ಬಣ್ಣದ ಪೆನ್ಸಿಲ್‌, ನಕ್ಷೆ ಮೊದಲಾದವು ನೀಡುತ್ತಾರೆ. ಹಣ ಪಾವತಿಸಿ ಶಾಲೆಯಲ್ಲೇ ಅವುಗಳನ್ನು ಖರೀದಿಸುವಂತೆ ಪೋಷಕರ ಮೇಲೆ ಒತ್ತಡ ಹೇರಲಾಗುತ್ತಿದೆ. ಮಾರುಕಟ್ಟೆಗಿಂತ ಹೆಚ್ಚಿನ ದರಗಳಲ್ಲಿ ಇವುಗಳನ್ನು ಮಾರಲಾಗುತ್ತಿದ್ದು, ಬಡ ಪೋಷಕರ ಜೇಬಿಗೆ ಹೊರೆಯಾಗಿದೆ. ಆದ್ದರಿಂದ ಖಾಸಗಿ ಶಾಲಾ ಕಾಲೇಜುಗಳಲ್ಲಿ ನಡೆಯುವ ಈ ಅಕ್ರಮ ದಂಧೆ ಕೂಡಲೆ ನಿಲ್ಲಿಸಬೇಕು ಹಾಗೂ ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.ಮನವಿ ಸ್ವೀಕರಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.ಈ ಸಂದರ್ಭದಲ್ಲಿ ಜಬೀವುಲ್ಲಾ ಮುತ್ತೂಭಾಯಿ ಉಸ್ಮಾನ್ ಗನ್ನಿ ಉಪಸ್ಥಿತರಿದ್ದರು.