ಶಾಲಾ, ಕಾಲೇಜುಗಳಿಗೆ ತೆರಳಲು ವಿದ್ಯಾರ್ಥಿಗಳಿಗೆ ಬಸ್ ಸೌಲಭ್ಯ

ರಾಯಚೂರು.ಡಿ.೦೪- ವಿವಿಧ ತಾಲೂಕುಗಳಿಂದ ಶಾಲಾ, ಕಾಲೇಜುಗಳಿಗೆ ತೆರಳಲು ವಿದ್ಯಾರ್ಥಿಗಳು ಬಸ್ ಸೌಕರ್ಯವಿಲ್ಲದೇ ಪರದಾಡುತ್ತಿದ್ದು, ಇದರ ಬಗ್ಗೆ ವಿದ್ಯಾರ್ಥಿಗಳಿಗೆ ಬಸ್ ಸೌಕರ್ಯ ಕಲ್ಪಿಸಲು ಸಮಾಜ ಸೇವಕರಾದ ಡಾ.ನಾಗವೇಣಿ ಅವರು ಸಂಬಂಧಪಟ್ಟ ರಾಯಚೂರು ಕಲ್ಯಾಣಿ ಕರ್ನಾಟಕ ಸಾರಿಗೆ ಸಂಸ್ಥೆಯ ಜಿಲ್ಲಾಧಿಕಾರಿಗಳಿಗೆ ದೂರವಾಣಿ ಮುಖಾಂತರ ಮಾತನಾಡಿ, ಲಿಂಗಸೂಗೂರು, ಮಸ್ಕಿ ಹಾಗೂ ಸಿಂಧನೂರು ಘಟಕದ ವೇಗಧೂತ ಬಸ್‌ಗಳನ್ನು ನಿಲುಗಡೆ ಮಾಡುವಂತೆ ಮನವಿ ಮಾಡಿದರು.
ಈ ಕುರಿತು ಮನವಿ ಸ್ವೀಕರಿಸಿದ ಸಿಂಧನೂರು ಘಟಕದ ವ್ಯವಸ್ಥಾಪಕರು, ಕೂಡಲೇ ವಿದ್ಯಾರ್ಥಿಗಳಿಗೆ ಶಾಲಾ, ಕಾಲೇಜುಗಳಿಗೆ ತೆರಳಲು ಸಾರಿಗೆ ಸಂಸ್ಥೆಯೂ ಬಸ್ ಸೌಲಭ್ಯ ಕಲ್ಪಿಸಲಾಗುತ್ತದೆಂದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.