ಶಾಲಾ ಕೊಠಡಿಗಳ ಯೋಜನೆಗೆ ಚಾಲನೆ

ಲಕ್ಷ್ಮೇಶ್ವರ,ನ15: ತಾಲೂಕಿನ ಬಟ್ಟೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಂದ್ರಳ್ಳಿ ಗ್ರಾಮದಲ್ಲಿ ಸೋಮವಾರ ಶಾಸಕ ರಾಮಣ್ಣ ಲಮಾಣಿ ಅವರು ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ವಿವೇಕ ಶಾಲಾ ಕೊಠಡಿಗಳ ಯೋಜನೆಗೆ ಚಾಲನೆ ನೀಡಿದರು. ಮಕ್ಕಳ ದಿನಾಚರಣೆಯಲ್ಲಿ ಪಾಲ್ಗೊಂಡು
ಬಳಿಕ ಮಾತನಾಡಿದ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಮುಖಾಂತರ ಗ್ರಾಮೀಣ ಪ್ರದೇಶದ ಬಡಮಕ್ಕಳಿಗೆ ಉನ್ನತ ಸೌಲಭ್ಯಗಳನ್ನು ಕಲ್ಪಿಸಿ ಕೊಟ್ಟು ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳನ್ನು ಅಣಿಗೊಳಿಸಲು ಸಂಕಲ್ಪ ಮಾಡಿ, ವಿವೇಕ ಸಕಲ ಸೌಲಭ್ಯಗಳ ಇರುವ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಚಾಲನೆ ನೀಡಿದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಂ ಮುಂದಿನಮನಿ ಇದ್ದರು, ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ ಜಗದೀಶಗೌಡ ಪಾಟೀಲ್ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಗ್ರಾಪಂ ಉಪಾಧ್ಯಕ್ಷರು, ಸರ್ವ ಸದಸ್ಯರು, ಎಸ್ ಡಿ ಎಂ ಸಿ ಅಧ್ಯಕ್ಷರು, ಸದಸ್ಯರುಗಳು, ಶಾಲಾ ಸಿಬ್ಬಂದಿ ವರ್ಗದವರು ಇದ್ದರು.