ಶಾಲಾ ಪ್ರಾರಂಭೋತ್ಸವ: ವಿದ್ಯಾರ್ಥಿಗಳನ್ನು ವಿಶೇಷವಾಗಿ ಸ್ವಾಗತಿಸಿದ ಶಿಕ್ಷಕ ವೃಂದ

ಸಂಜೆವಾಣಿ ವಾರ್ತೆ
ಹನೂರು ಜೂ 1:- ತಾಲ್ಲೂಕಿನ ಮಾರ್ಟಳ್ಳಿ ಸೆಂಟ್ ಮೇರಿಸ್ ಶಾಲೆಯಲ್ಲಿ ಮೊದಲ ದಿನ ಶಾಲೆಯಲ್ಲಿ ಮಕ್ಕಳಿಗೆ ಒಣ ದ್ರಾಕ್ಷಿ , ನೀಡಿ ಸ್ವಾಗತಿಸಲಾಯಿತು. ತಳಿರು ತೋರಣಗಳಿಂದ ಶಾಲೆಗಳನ್ನು ಶೃಂಗರಿಸಲಾಗುತ್ತಿದ್ದು, ಶುಕ್ರವಾರ ಶಾಲೆಗಳಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು.
ತಾಲೂಕಿನ ಸುಳ್ವಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿಯೂ ಪ್ರಾರಂಭೋತ್ಸವದ ಹಿನ್ನೆಲೆ ಶಾಲೆಗೆ ಆಗಮಿಸಿದ ಮಕ್ಕಳಿಗೆ ಹೋಗುಚ್ಚ ನೀಡಿ ಸ್ವಾಗತಿಸಲಾಯಿತು. ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳು ಶಿಕ್ಷಕರ ಸ್ವಾಗತಕ್ಕೆ ಸಂತೋಷ ವ್ಯಕ್ತಪಡಿಸಿ ಸಂಭ್ರಮಿಸಿದರು.
ಹನೂರು ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸೇರಿದಂತೆ ವಿವೇಕಾನಂದ ಶಾಲೆ, ಕ್ರೀಸ್ತರಾಜ ಶಾಲೆ, ಗೌತಮ್ ಶಿಕ್ಷಣ ಸಂಸ್ಥೆ, ಸೇರಿದಂತೆ ತಾಲೂಕಿನಾದ್ಯಂತ ಇರುವ ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳಲ್ಲಿ ಶಾಲೆಯ ಪ್ರಾರಂಭವನ್ನು ಸಂಭ್ರಮಸಡಗರದಿಂದ ಪ್ರಾರಂಭಿಸಿದ್ದಾರೆ.
ಶಾಲೆಯ ಮುಂಭಾಗ ಹಸಿರು ತೋರಣಗಳನ್ನು ಕಟ್ಟಿ ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳಿಗೆ ಹೂ ಗುಚ್ಛ ನೀಡಿ ಸಿಹಿ ಹಂಚಿ ಮಕ್ಕಳನ್ನು ಆತ್ಮೀಯವಾಗಿ ಸ್ವಾಗತಿಸಿದ ಶಿಕ್ಷಕರು ಶಾಲೆಯ ಆರಂಭೋತ್ಸವದ ದಿನದ ಕ್ಷಣಗಳನ್ನು ಮಕ್ಕಳೊಂದಿಗೆ ಸಂಭ್ರಮದಿಂದ ಆಚರಿಸಲಾಯಿತು.