ಸೇಡಂ, ಮೇ, 29: ಪಟ್ಟಣದ ನಂ 2 ವಿದ್ಯಾನಗರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶಾಲಾ ಪ್ರಾರಂಭೋತ್ಸವ ಅಂಗವಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ವಿಜಯಕುಮಾರ್ ಜಮಖಂಡಿ ಅವರು ಭೇಟಿ ನೀಡಿದರು. ಮಕ್ಕಳ ದಾಖಲಾತಿ ಪ್ರಕ್ರಿಯೆಯನ್ನು ಪರಿಶೀಲನೆ ನಡೆಸಿದ ಅವರು ಶಾಲಾ ಸುತ್ತಮುತ್ತ ಸ್ವಚ್ಛತೆಗೆ ಆದ್ಯತೆ ನೀಡಿ ಎನ್ನುವುದರ ಜೊತೆಗೆ ಎಲ್ಲಾ ಶಿಕ್ಷಕರಿಗೆ ಹೊಸ ಶೈಕ್ಷಣಿಕ ವರ್ಷಕ್ಕೆ ಶುಭ ಕೋರಿದರು. ಈ ವೇಳೆಯಲ್ಲಿ ಶಾಲಾ ಮಕ್ಕಳು ಶಿಕ್ಷಕರು ಸಿಬ್ಬಂದಿ ವರ್ಗದವರು ಇದ್ದರು.