ಚನ್ನಮ್ಮನ ಕಿತ್ತೂರ,ಜೂ1: ಕ್ಷೇತ್ರದ ದಾಸ್ತಿಕೊಪ್ಪ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವನ್ನು ಅದ್ದೂರಿಯಾಗಿ ಆಚರಿಸಲಾಯಿತು.
ಪ್ರಾರಂಭೋತ್ಸವ ಕಾರ್ಯಕ್ರಮಕ್ಕೆ ಶಾಸಕ ಬಾಬಾಸಾಹೇಬ ಪಾಟೀಲ ಅವರನ್ನು ಮೆರವಣಿಗೆಯ ಮೂಲಕ ಚಕ್ಕಡಿಯಲ್ಲಿ ಕರೆತರಲಾಯಿತು. ಶಾಲೆಯನ್ನು ತಳಿರು- ತೋರಣಗಳಿಂದ ಮದುವಣಗಿತ್ತಿಯಂತೆ ಸಿಂಗರಿಸಲಾಗಿತ್ತು.
ಶಾಸಕ ಬಾಬಾಸಾಹೇಬ ಪಾಟೀಲ ಮಾತನಾಡಿ, ಮಕ್ಕಳು ವಿದ್ಯೆಯಿಂದ ವಂಚಿತರಾಗಬಾರದು ಅವರು ವಿದ್ಯೆ ಕಲಿತು ಭವಿಷ್ಯ ರೂಪಿಸಿಕೊಳ್ಳಬೇಕು. ಮಕ್ಕಳನ್ನು ಪ್ರತಿಯೊಬ್ಬರು ಶಾಲೆಗೆ ಕಳುಹಿಸಿ ಸರ್ಕಾರದ ಸಾಕಷ್ಟು ಸೌಲಭ್ಯಗಳಿದ್ದು ಅವುಗಳನ್ನು ಸದುಪಯೋಗ ಮಾಡಿಕೊಳ್ಳಲಿ ಎಲ್ಲ ಮಕ್ಕಳನ್ನು ಶಾಲೆಗೆ ಕಳುಹಿಸಿ ಎಂದರು.
ಈ ವೇಳೆ ಕ್ಷೇತ್ರ ಶಿಕ್ಷಣಾಧಿಕಾರಿ ಆರ್. ಟಿ. ಬಳಿಗಾರ, ಸಮನ್ವಯಾಧಿಕಾರಿ ಗಾಯತ್ರಿ ಅಜ್ಜನ್ನವರ, ಶಿಕ್ಷಣ ಸಂಯೋಜಕ ಮಹೇಶ ಹೆಗಡೆ, ಗ್ರಾಮ ಪಂಚಾಯತ ಅಧ್ಯಕ್ಷ ಉಮೇಶ ಸಿದ್ರಾಮನಿ,ಜಬೀನಾ ಕಿತ್ತೂರು, ಎಸ್ಡಿಎಮ್ಸಿ ಅಧ್ಯಕ್ಷರು ಸರ್ವ ಸದಸ್ಯರು ಸೇರಿದಂತೆ ಗ್ರಾಮಸ್ಥರು ಇದ್ದರು.