ಶಾಲಾ ಮಕ್ಕಳಿಗೆ ಆಟ ಪಾಠದ ಜೊತೆಗೆ ಯೋಗ ಧ್ಯಾನ ತಿಳಿಸಲು ಕರೆ

ದಾವಣಗೆರೆ.ಜೂ.೨೩; ತಾಲೂಕು ಎಲೆಬೇತೂರು ಗ್ರಾಮದ ಶ್ರೀ ಕೊಂಡಜ್ಜಿ ಬಸಪ್ಪ ಪ್ರೌಢಶಾಲೆ ಹಾಗೂಶ್ರೀ ತರಳಬಾಳು ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಆವರಣದಲ್ಲಿ ಒಂಬತ್ತನೆಯ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಗಳಿಗೆ ಆಗಮಿಸಿದ್ದ ಶ್ರೀತರಳಬಾಳು ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಅಧ್ಯಕ್ಷರಾದ ಎಚ್ ಬಸವರಾಜಪ್ಪ ಮಾತನಾಡಿ ಪ್ರತಿನಿತ್ಯ ಶಾಲಾ ಮಕ್ಕಳಿಗೆ ಆಟ ಪಾಠದ ಜೊತೆಗೆ ಯೋಗ ಧ್ಯಾನದ ಬಗ್ಗೆ ತಿಳಿಸಿಕೊಡಬೇಕು. ಮನೆಯಲ್ಲಿ ಪ್ರತಿಯೊಬ್ಬರೂ ಸ್ವಲ್ಪ ಹೊತ್ತು ಯೋಗ ಧ್ಯಾನ ಮಾಡುವುದರಿಂದ ಆರೋಗ್ಯಕ್ಕೆ ಹಾಗೂ ಮನಸ್ಸಿಗೆ ಸಮಾಧಾನ ಎಂದು ಈ ಸಂದರ್ಭದಲ್ಲಿ ತಿಳಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಸಲಹ ಸಮಿತಿಯ ಸದಸ್ಯರು ಪೋಷಕರು ಎರಡು ಶಾಲೆಯ ಶಿಕ್ಷಕ ವೃಂದದವರು ಹಾಗೂ ಎರಡು ಶಾಲೆಯ ವಿದ್ಯಾರ್ಥಿ ವಿದ್ಯಾರ್ಥಿನಿಯರು ಯೋಗಾಸನ ಕಾರ್ಯಕ್ರಮದಲ್ಲಿ ಭಾಗವಹಿಸಿ ಯೋಗ ಮಾಡಿ ಒಂಬತ್ತನೆಯ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.