ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್ ವಿತರಣೆ 

ಸಂಜೆವಾಣಿ ವಾರ್ತೆ

 ಹಿರಿಯೂರು ಆ. 18 – ಇಲ್ಲಿನ ಇನ್ನರ್ ವೀಲ್ ಕ್ಲಬ್ ವತಿಯಿಂದ 76ನೆಯ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ತಾಲೂಕಿನ ಹುಚ್ಚವ್ವನಹಳ್ಳಿ ಗ್ರಾಮದ ಹೊಸೂರು ಸರ್ಕಾರಿ ಶಾಲೆಯ ಮಕ್ಕಳಿಗೆ ಉಚಿತ ನೋಟ್ ಬುಕ್ ಹಾಗೂ ವಿವಿಧ ಪರಿಕರಗಳನ್ನು ನೀಡಿದರು ಹಾಗೂ ಶಾಲೆ ಆವರಣದಲ್ಲಿ ಹಣ್ಣಿನ ಗಿಡಗಳನ್ನು ನೆಡಲಾಯಿತು ಈ ಸಂದರ್ಭದಲ್ಲಿ ಇನ್ನರ್ ವೀಲ್ ಕ್ಲಬ್ ಅಧ್ಯಕ್ಷರಾದ ಲಕ್ಷ್ಮೀ ರಾಜೇಶ್ ಸೌಮ್ಯ ಪ್ರಶಾಂತ್, ಸ್ವರ್ಣ ಲತಾ, ಪದ್ಮಜಾ ಮಧುರ ಮತ್ತು ಶಾಲೆಯ ಶಿಕ್ಷಕ ವೃಂದದವರು ಮತ್ತು ಸಿ ಆರ್ ಪಿ ಜಯಪ್ರಕಾಶ್ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು