ಶಾಲೆಗಳ ಪ್ರಾರಂಭ ಇನ್ನೂ ಅಸ್ಪಷ್ಟ

ಬೆಂಗಳೂರು, ನ ೪,-ರಾಜ್ಯದಲ್ಲಿ ಶಾಲೆ ಆರಂಭಿಸುವ ಬಗ್ಗೆ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ರಾಜ್ಯದಲ್ಲಿ ಶಾಲೆಗಳ ಆರಂಭದ ಸ್ಥಿತಿಗತಿ ಬಗ್ಗೆ ಅವಲೋಕನ ನಡೆಸಲಾಗುತ್ತಿದೆ. ನಂತರ ಮುಖ್ಯಮಂತ್ರಿಗಳಿಗೆ ವರದಿ ಸಲ್ಲಿಸಿ ಮನವರಿಕೆ ಮಾಡಲಾಗುವುದು. ನಂತರ ಮುಂದೆ ಏನು ಮಾಡಬೇಕೋ ಎಂಬುದನ್ನು ನಿರ್ಧರಿಸುತ್ತೇವೆ ಎಂದರು.

ಶಾಲೆ ಆರಂಭ ವಿಚಾರ ಕುರಿತು ಶಿಕ್ಷಣ ಇಲಾಖೆ ಅಧಿಕಾರಿಗಳ ಜತೆ ಚರ್ಚೆ ನಡೆಸಿದ ಬಳಿಕ ರಾಜ್ಯದಲ್ಲಿ ಶಾಲೆಗಳ ಆರಂಭದ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಈ ಬಗ್ಗೆ ಇನ್ನು ಎರಡು ದಿನಗಳ ಕಾಲ ಚರ್ಚಿಸಲಾಗುವುದು. ಎಲ್ಲರ ಅಭಿಪ್ರಾಯ ಸಂಗ್ರಹಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿದರು.

ಎರಡು ವಿಚಾರಗಳ ಬಗ್ಗೆ ಚರ್ಚಿಸಿ ಅಭಿಪ್ರಾಯ ಸಂಗ್ರಹ ಮಾಡಲಾಗಿದೆ. ಶಾಲೆಗಳ ಆರಂಭ ವಿಚಾರವಾಗಿ ಸಭೆ ನಡೆಸಿ ಚರ್ಚಿಸಿದ್ದೇವೆ. ಎಲ್ಲಾ ಇಲಾಖೆ ಅಧಿಕಾರಿಗಳ ಜತೆ ಚರ್ಚೆ ನಡೆಸಿದ್ದೇವೆ. ಎಲ್ಲರ ಅಭಿಪ್ರಾಯವನ್ನು ನಾವು ಸಂಗ್ರಹಿಸಿದ್ದೇವೆ ಎಂದು ತಿಳಿಸಿದರು

ಆರೋಗ್ಯ ಇಲಾಖೆ ಜತೆ ಚರ್ಚೆ

ರಾಜ್ಯದಲ್ಲಿ ಶಾಲಾ ಕಾಲೇಜುಗಳನ್ನು ಆರಂಭಿಸುವ ಬಗ್ಗೆ ಆರೋಗ್ಯ ಇಲಾಖೆಯಲ್ಲಿ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ಸದ್ಯಕ್ಕೆ ಎಂಟನೇ ತರಗತಿಯ ನಂತರ ಶಾಲಾ ಕಾಲೇಜುಗಳನ್ನು ಆರಂಭಿಸುವ ಬಗ್ಗೆ ಒಲವು ವ್ಯಕ್ತವಾಗಿದೆ ಬಗ್ಗೆ ಇನ್ನೂ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ ಎಂದು ಅವರು ತಿಳಿಸಿದ್ದಾರೆ.