ಶಾಲೆಗೆ ಕಾಂಪೌಂಡ್ ನಿರ್ಮಿಸಲು ಮಕ್ಕಳಿಂದ ಮನವಿ

ಹರಪನಹಳ್ಳಿ.ನ.೧೯ : ತಾಲ್ಲೂಕಿನ ಅರಸೀಕೆರೆ ಗ್ರಾಮದ ಸರ್ಕಾರಿ ಮಾದರಿ ಶಾಲಾ ಕಾಂಪೌಂಡ್ ನಿರ್ಮಾಣ ಮಾಡುವಂತೆ ವಿದ್ಯಾರ್ಥಿಗಳು ಬಳ್ಳಾರಿ ಸಂಸದ ವೈ.ದೇವೇಂದ್ರಪ್ಪ ಅವರಿಗೆ ಮನವಿ ಸಲ್ಲಿಸಿದರು.ಗ್ರಾಮದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 47ರ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದು, ರಸ್ತೆಗೆ ಹೊಂದಿಕೊAಡಿದ್ದ ಕಾಂಪೌAಡ್ ಕುಸಿದಿದೆ.ಕಾಂಪೌAಡ್ ಇಲ್ಲದಿರುವುದರಿಂದ ರಸ್ತೆಯಲ್ಲಿನ ದೂಳು ಕೊಠಡಿಯೊಳಗೆ ಬರುತ್ತಿದೆ. ಅಡುಗೆ ಮನೆ, ಊಟದಲ್ಲಿ ದೂಳು ಬೆರೆಯುತ್ತಿದೆ ಎಂದು ದೂರಿದರು.ಚರಂಡಿ ನಿರ್ಮಾಣ ಕಾರ್ಯ ಮಂದಗತಿಯಲ್ಲಿ ಸಾಗುತ್ತಿರುವುದು ತೆಲೆನೋವಾಗಿ ಪರಿಣಮಿಸಿದೆ. ಶಾಲಾ ಮಕ್ಕಳಿಗೆ ಚರಂಡಿಯ ದಾಟಲು ಸಾಧ್ಯವಾಗುತ್ತಿಲ್ಲ. ತೀವ್ರಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಮನವಿಯಲ್ಲಿ ಕೋರಿದ್ದಾರೆ.ಮನವಿ ಸ್ವೀಕರಿಸಿ ಮಾತನಾಡಿದ ಬಳ್ಳಾರಿ ಸಂಸದ ವೈ.ದೇವೇಂದ್ರಪ್ಪ, ಸರ್ಕಾರಿ ಶಾಲಾ ಕಾಂಪೌAಡ್ ನಿರ್ಮಾಣಕ್ಕೆ ಕ್ರಿಯಾಯೋಜನೆ ರೂಪಿಸಲಾಗಿದೆ. ಕೂಡಲೇ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದರು.ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕ ಅರ್ಜುನ್ ಪರಸಪ್ಪ, ಶಿಕ್ಷಕಿ ಬಂದಮ್ಮ, ಚೇತನ, ಪರಶುರಾಮ ಇತರರು ಇದ್ದರು.