ಶಾಲೆಯ ಕಟ್ಟಡ ಸುರಕ್ಷತೆಗೆ ಗಮನ ಕೊಡಿ : ಬಸವಂತರಾಯ ಜಿಡ್ಡೆ

?????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????

ಭಾಲ್ಕಿ: ಜು.27:ಮುಖ್ಯ ಶಿಕ್ಷಕರು ತಮ್ಮ ತಮ್ಮ ಶಾಲೆಗಳ ಕಟ್ಟಡ ಸುರಕ್ಷತೆಯ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಸವಂತರಾಯ ಜಿಡ್ಡೆ ಹೇಳಿದರು. ಪಟ್ಟಣದ ಕ್ಷೇತ್ರ ಸಂಪನ್ಮೂಲ ಕೇಂದ್ರ (ಬಿಆರ್‍ಸಿ) ಯಲ್ಲಿ ಮಂಗಳವಾರ ನಡೆದ ಸರ್ಕಾರಿ ಮತ್ತು ಅನುದಾನಿತ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಭೆಯಲ್ಲಿ ಮಾತನಾಡಿದ ಅವರು, ನಮ್ಮ ತಾಲೂಕಿನಲ್ಲಿರು ಎಲ್ಲಾ ಶಾಲೆಗಳಲ್ಲಿ ಸುಮಾರು 1809 ಕೊಠಡಿಗಳಿವೆ ಅವುಗಳಲ್ಲಿ 190 ಕೊಠಡಿಗಳು ಶಿತಿಲಾವಸ್ಥೆಯಲ್ಲಿವೆ. ಇವುಗಳ ಬಗ್ಗೆ ಮುಖ್ಯ ಶಿಕ್ಷಕರು ಲಿಖಿತ ಮಾಹಿತಿ ನೀಡಿ ಅನುದಾನ ಪಡೆದು ಕೊಠಡಿಗಳು ಸುರಕ್ಷಿತವಾಗಿಟ್ಟುಕೊಳ್ಳುವಂತೆ ನೋಡಿಕೊಳ್ಳಬೇಕು. ಮಳೆಗಾಲ ಇರುವ ಕಾರಣ ಮುಖ್ಯ ಶಿಕ್ಷಕರು ಸ್ವಚ್ಛತೆ ಮತ್ತು ಸುಸ್ಥಿರತೆಯ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು. ಅಲ್ಲದೇ ಇದುವರೆಗೆ ಕ್ರೀಢಾನಿಧಿ, ಶಿಕ್ಷಕರ ಕಲ್ಯಾಣ ನಿಧಿ, ವಿದ್ಯಾರ್ಥಿಗಳ ಕಲ್ಯಾಣ ನಿಧಿ ಸೇರಿದಂತೆ ಯಾವುದೇ ಸರ್ಕಾರಿ ಶುಲ್ಕ ಪಾವತಿಸದೇ ಇದ್ದಲ್ಲಿ ತಕ್ಷಣವೇ ಶುಲ್ಕ ಪಾವತಿಸಬೇಕು ಎಂದು ತಾಕೀತು ಮಾಡಿದರು. ಎಸ್‍ಎಸ್‍ಎಲ್‍ಸಿ ಫಲಿತಾಂಶ ಸುಧಾರಣೆಯ ನಿಟ್ಟಿನಲ್ಲಿ, ಶಿಕ್ಷಕರ ಕೊರತೆ ನೀಗಿಸುವಂತೆ ಶಾಸಕರ ಮುತುವರ್ಜಿಯ ಮೇರೆಗೆ ಎಲ್ಲಾ ಪ್ರೌಢಶಾಲೆಗಳಿಗೂ ಸುಮಾರು 42 ಜನ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು ಅನುಮತಿ ಪಡೆಯಲಾಗಿದೆ. ಯಾವ ಶಾಲೆಗಳಿಗೆ ಶಿಕ್ಷಕರ ಕೊರತೆ ಇದೆಯೋ ಅಂತಹ ಶಾಲೆಯ ಮುಖ್ಯ ಶಿಕ್ಷಕರು ತಮ್ಮ ಶಾಲೆಯ ವಿಷಯವಾರು ಅತಿಥಿ ಶಿಕ್ಷಕರನ್ನು ನೇಮಿಸಿಕೊಂಡು, ಉತ್ತಮವಾಗಿ ಪಾಠ ಮಾಡಿ ಎಸ್‍ಎಸ್‍ಎಲ್‍ಸಿ ಫಲಿತಾಂಶ ಸುಧಾರಿಸುವ ನಿಟ್ಟಿನಲ್ಲಿ ಕಾರ್ಯಮಾಡಬೇಕು ಎಂದು ಹೇಳಿದರು.

ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ಮಲ್ಲಿನಾಥ ಸಜ್ಜನ ಮಾತನಾಡಿ, ಅಕ್ಷರ ದಾಸೋಹ ಯೋಜನೆಯಲ್ಲಿ ವಿದ್ಯಾರ್ಥಿಗಳ ಹಾಜರಾತಿ ನೀಡುವುದು ಕಡ್ಡಾಯವಾಗಿದೆ. ಮುಖ್ಯಶಿಕ್ಷಕರು ಎಸ್‍ಎಟಿಎಸ್ ತಂತ್ರಾಂಶದಲ್ಲಿ ಮತ್ತು ಈಜಿ ಎಸ್‍ಎಮ್‍ಎಸ್ ಮೂಲಕ ತಮ್ಮ ಶಾಲೆಗಳ ಹಾಜರಾತಿ ಬೆಳಿಗ್ಗೆ 11 ಗಂಟೆಯವರೆಗೆ ಕಡ್ಡಾಯವಾಗಿ ನಮೂದಿಸಬೇಕು. ಅಡುಗೆ ಕೋಣೆ ಮತ್ತು ಆಹಾರಧಾನ್ಯಗಳ ಸ್ವಚ್ಛತೆಯ ಬಗ್ಗೆ ಹೆಚ್ಚಿನ ಗಮನ ಕೊಡಬೇಕು ಎಂದು ಹೇಳಿದರು.

ಪಠ್ಯ ಪುಸ್ತಕಗಳ ನೋಡಲ್ ಅಧಿಕಾರಿಯಾದ ಇಸಿಓ ಜಯರಾಮ ಬಿರಾದಾರ ಮಾತನಾಡಿ, ಕೆಲವು ಶಾಲೆಯವರು ಪಠ್ಯಪುಸ್ತಕಗಳನ್ನು ತೆಗೆದುಕೊಂಡು ಹೋಗಿ, ವಿದ್ಯಾರ್ಥಿಗಳಿಗೆ ಹಂಚಿಕೆ ಮಾಡಿದ್ದಾರೆ ಆದರೆ ಎಸ್‍ಎಟಿಎಸ್ ತಂತ್ರಾಂಶದಲ್ಲಿ ಈ ಕುರಿತು ಮಾಹಿತಿ ಸಲ್ಲಿಸಿಲ್ಲ. ತಕ್ಷಣವೇ ಈ ಮಾಹಿತಿ ಸಲ್ಲಿಸಬೇಕು ಎಂದು ಹೇಳಿದರು. ಬಿಆರ್‍ಪಿ ಶಕುಂತಲಾ ಸಾಲಮನಿ ಮಾತನಾಡಿ, ನಿಷ್ಟಾ 2.0 ತರಬೇತಿ ಪಡೆದ ಶಿಕ್ಷಕರು ಕಡ್ಡಾಯವಾಗಿ ತಮ್ಮ ಎಲ್ಲಾ ಪ್ರಮಾಣ ಪತ್ರಗಳೊಂದಿಗೆ ತಮ್ಮ ಸಂಪೂರ್ಣ ಮಾಹಿತಿ ಸಲ್ಲಿಸಬೇಕು ಎಂದು ಹೇಳಿದರು. ಇಸಿಓ ಸಹದೇವ.ಜಿ ಮಾತನಾಡಿ, ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳ ಗೈರು ಹಾಜರಿಯ ಬಗ್ಗೆ ಮಾಹಿತಿ ನೀಡಬೇಕು. ಈ ಸಲ ಹಾಜರಾತಿಯ ಬಗ್ಗೆ ಹೆಚ್ಚಿನ ಗಮನ ಕೊಟ್ಟು ಪ್ರತಿಶತ 75 ಹಾಜರಾತಿ ಇರುವ ಮಕ್ಕಳ ಪರೀಕ್ಷಾ ಶುಲ್ಕ ಮಾತ್ರ ಮಂಡಳಿಗೆ ಸಲ್ಲಿಸಬೇಕು ಎಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಮುಖ್ಯಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ರಾಜಕುಮಾರ ಜೊಳದಪಕೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ಜೋಷಿ, ಮುಖ್ಯ ಶಿಕ್ಷಕ ಎಮ್‍ಡಿ ಹನೀಫ್, ಶ್ರೀಕಾಂತ ಮೂಲಗೆ, ರಮೇಶ ಮರೂರಕರ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕ ಜಯರಾಜ ದಾಬಶೆಟ್ಟಿ ಸ್ವಾಗತಿಸಿದರು. ಚಂದ್ರಕಾಂತ ಖಂಡಾಳೆ ನಿರೂಪಿಸಿದರು. ಅಶೋಕ ಬರ್ಮಾ ವಂದಿಸಿದರು.