ಶಾಲೆಯ ಮಕ್ಕಳಿಗೆ ಹೂ ನೀಡುವ ಮೂಲಕ ಸ್ವಾಗತ

ಸಿರವಾರ,ಜೂ.೦೧-
ತಾಲೂಕಿನ ಮಾಡಗಿರಿ ಗ್ರಾಮದ ಉನ್ನತಿಕರಿಸಿದ ಸರ್ಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ದಂದು ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಹನುಮಂತ ರವರು ವಿದ್ಯಾರ್ಥಿಗಳಿಗೆ ಹೂ ಗುಚ್ಚಿ ನೀಡುವ ಮುಖಾಂತರ ಶಾಲೆಗೆ ಮಕ್ಕಳನ್ನು ಬರಮಾಡಿಕೊಂಡರು.
ನಂತರ ಮಾತನಾಡಿದ ಅವರು ೨೦೨೩-೨೪ನೇ ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಭೋತ್ಸವವಾಗಿದೆ. ಸರಕಾರಿ ಶಾಲೆಯಲ್ಲಿ ಉಚಿತ ಹಾಗು ಗುಣಮಟ್ಟದ ಶಿಕ್ಷಣ ದೊರೆಯುತ್ತದೆ. ಸರಕಾರ ಮಕ್ಕಳಿಗಾಗಿ ಹಲವಾರು ಯೋಜನೆಗಳನ್ನು ನೀಡುತ್ತಿದೆ. ಇದನ್ನು ಮಕ್ಕಳು ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.
ಈ ವೇಳೆ ಶಾಲೆಯ ಮುಖ್ಯೋಪಾಧ್ಯಯರಾದ ಇಂದ್ರಮ್ಮ, ಎಸ್‌ಡಿಎಂಸಿ ಸದಸ್ಯರು, ಶಿಕ್ಷಕರಾದ ಚನ್ನವೀರಯ್ಯ ಹೊಸಮಠ, ಸೇರಿದಂತೆ ವಿದ್ಯಾರ್ಥಿಗಳು ಇದ್ದರು.