ಶಾಲೆ ಆರಂಭ ಇನ್ನೂ ತೀರ್ಮಾನವಿಲ್ಲ

ಬೆಂಗಳೂರು, ನ. ೨೦- ರಾಜ್ಯದಲ್ಲಿ ಶಾಲೆಗಳ ಆರಂಭದ ಬಗ್ಗೆ ಇನ್ನು ಯಾವುದೇ ತೀರ್ಮಾನಗಳು ಆಗಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದರು.
ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜೊತೆ ಚರ್ಚಿಸಿದ ನಂತರ, ಶಾಲೆಗಳ ಆರಂಭದ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು. ಇನ್ನು ಮುಖ್ಯಮಂತ್ರಿಗಳ ಜೊತೆ ಈ ಬಗ್ಗೆ ಚರ್ಚೆ ನಡೆಸಿಲ್ಲ ಎಂದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದ್ಯಾಗಮ ಯೋಜನೆ ಪುನರಾರಂಭಿಸಬೇಕು ಎಂದು ಅನೇಕ ಹಳ್ಳಿಗಳಿಂದ ಮನವಿ ಬಂದಿದೆ. ಶಾಲೆ ಆರಂಭದ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸುವ ಸಂದರ್ಭದಲ್ಲಿ ವಿದ್ಯಾಗಮ ಯೋಜನೆಯ ಬಗ್ಗೆಯೂ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದರು.
ಬರುವ ಡಿಸೆಂಬರ್ ನಲ್ಲಿ ಶಾಲೆಗಳನ್ನು ಆರಂಭಿಸಲಾಗುವುದೇ ಎಂಬ ಪ್ರಶ್ನೆಗೆ ಅವರು ಯಾವುದೇ ಉತ್ತರ ಕೊಡದೆ ಮೌನಕ್ಕೆ ಶರಣಾದರು.