ಶಾಲೆ ಪ್ರಾರಂಭೋತ್ಸವ : ಶಾಲೆಗಳಿಗೆ ಡಿಸಿ ಭೇಟಿ

 ದಾವಣಗೆರೆ.ಜ.೨; ಶಾಲೆ ಪ್ರಾರಂಭೋತ್ಸವ ಹಾಗೂ ವಿದ್ಯಾಗಮ-2 ಕಾರ್ಯಕ್ರಮದ ಅಂಗವಾಗಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಇವರು ನಗರದ ನಿಟುವಳ್ಳಿಯ ದುರ್ಗಾಂಬಿಕಾ ಸರ್ಕಾರಿ ಪ್ರೌಢಶಾಲೆ ಹಾಗೂ ಜಾಲಿನಗರದ ದುರ್ಗಾಂಬಿಕಾ ಪ್ರೌಢಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಕೊರೊನಾ ಹಿನ್ನೆಲೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಿ, ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.