ಶಾವಂತಗೇರಾ ಶಾಲೆಯಲ್ಲಿ ಮಕ್ಕಳ ದಿನಾಚರಣೆ

ಗಬ್ಬೂರು,ನ.೧೫-ದೇವದುರ್ಗ ತಾಲೂಕಿನ ಸುಂಕೇಶ್ವರಹಾಳ ಕ್ಲಸ್ಟರ್ ವ್ಯಾಪ್ತಿಯಲ್ಲಿ ಬರುವ ಶಾವಂತಗೇರಾ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಲಾಯಿತು.
ಶಾಲಾ ವಿದ್ಯಾರ್ಥಿಗಳು ಮಾತನಾಡಿ,ದಿ.ಪಂಡಿತ ಜವಾಹರಲಾಲ್ ನೆಹರು ಸ್ವತಂತ್ರ ಭಾರತದ ಪ್ರಥಮ ಪ್ರಧಾನಿಯಾಗಿ ದೇಶದ ಏಳಿಗೆಗೆ ಪಂಚವಾರ್ಷಿಕ ಯೋಜನೆ ಸೇರಿದಂತೆ ಕೃಷಿ, ಕೈಗಾರಿಕೆ, ನೀರಾವರಿ ಶಿಕ್ಷಣ, ಆರೋಗ್ಯ ಸೇರಿದಂತೆ ಹಲವು ಮಹತ್ವದ ಯೋಜನೆಗಳನ್ನು ಜಾರಿಗೊಳಿಸಿದ ಧೀಮಂತ ನಾಯಕ ಅವರ ಆದರ್ಶಗಳನ್ನು ನಾವು ಜೀವನದಲ್ಲಿ ಪಾಲಿಸಬೇಕೆಂದು ಕರೆ ನೀಡಿದರು.
ಪ್ರಭಾರಿ ಮುಖ್ಯ ಶಿಕ್ಷಕ ಮಹೇಶ ಮಾತನಾಡಿದರು.ಎಸ್ ಡಿ ಎಮ್ ಸಿ ಅಧ್ಯಕ್ಷ ಶಿವು ನಾಯಕ,ಸಹ ಶಿಕ್ಷಕಿಯರಾದ ರೂಪಾ, ಜಯಶ್ರೀ ದೇಸಾಯಿ,ಅಥಿತಿ ಶಿಕ್ಷಕರು,ವಿದ್ಯಾರ್ಥಿಗಳು ಉಪಸ್ಥಿತರಿದ್ದರು.