ಶಾಶ್ವತ ಅಂಗವೈಕಲ್ಯ ತಡೆಗೆ ಪೋಲಿಯೋ ಲಸಿಕೆ

ಬೀದರ್: ಮಾ.2:ಜಿಲ್ಲೆಯಲ್ಲಿ ಮಾರ್ಚ್ 3ರಿಂದ 6ರ ವರೆಗೆ ಸಾರ್ವತ್ರಿಕ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ರಾತ್ರಿ ನಡೆದ ಪಲ್ಸ್ ಪೆÇೀಲಿಯೊ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಾರ್ಚ್ 3ರಂದು ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ವತಿಯಿಂದ ಸಾರ್ವತ್ರಿಕ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಸಾರ್ವಜನಿಕರು ತಮ್ಮ 5 ವರ್ಷದ ಒಳಗಿನ ಮಕ್ಕಳಿಗೆ ತಪ್ಪದೇ ಪೆÇೀಲಿಯೋ ಲಸಿಕೆ ಹಾಕಿಸಬೇಕು ಎಂದು ಹೇಳಿದರು.

ಮಗುವಿನ ಶಾಶ್ವತ ಅಂಗವೈಕಲ್ಯ ತಡೆಯಲು ಎರಡು ಹನಿ ಪಲ್ಸ್ ಪೆÇೀಲಿಯೋ ಅತ್ಯಗತ್ಯ. ಭಾರತ ಪೆÇೀಲಿಯೋ ಮುಕ್ತ ದೇಶವಾಗಿದೆ. ಆದರೆ, ಕೆಲ ದೇಶಗಳಲ್ಲಿ ಪೆÇೀಲಿಯೋ ಇನ್ನೂ ಭೀತಿಯನ್ನುಂಟು ಮಾಡಿದೆ. ನಮ್ಮ ದೇಶದಲ್ಲಿ ಇದನ್ನು ಮರುಕಳಿಸುವ ಸಾಧ್ಯತೆ ಇರುವುದರಿಂದ ಪೆÇೀಲಿಯೋ ಲಸಿಕೆ ಹಾಕಲಾಗುತ್ತಿದೆ ಎಂದರು.

ಮಾರ್ಚ್ 3ರಂದು ನಡೆಯುವ ಪೆÇೀಲಿಯೊ ಲಸಿಕಾ ಕಾರ್ಯಕ್ರಮ ಬೀದರ್ ಜಿಲ್ಲೆಯಲ್ಲಿ ಒಟ್ಟು 2,10,212 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. 1,001 ಪೆÇೀಲಿಯೋ ಬೂತ್ ಗಳನ್ನು ಬೀದರ್ ಜಿಲ್ಲೆಯಲ್ಲಿ ಮಾಡಲಾಗುವುದು. 13 ಮೊಬೈಲ್ ತಂಡಗಳು ಕಾರ್ಯನಿರ್ವಹಿಸಲಿವೆ. ಆರೋಗ್ಯ ಇಲಾಖೆಯ ಅಧಿಕಾರಿ ಮತ್ತು ಆಶಾ, ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಒಟ್ಟು 2,156 ಜನ ಲಸಿಕೆ ಹಾಕುವ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಇದರ ಮೇಲ್ವಿಚಾರಣೆಗೆ 216 ಜನರನ್ನು ನಿಯೋಜಿಸಲಾಗಿದೆ ಎಂದು ವಿವರಿಸಿದರು.

ಆರೋಗ್ಯ ಇಲಾಖೆಯ ಅಧಿಕಾರಿಗಳು, ಆಶಾ, ಅಂಗನವಾಡಿ ಕಾರ್ಯಕರ್ತೆಯರು ಪೆÇೀಲಿಯೋ ಲಸಿಕೆ ಹಾಕಲು ಬಂದಾಗ ಜನ ಅವರಿಗೆ ಸಹಕರಿಸಬೇಕು. ಮಾರ್ಚ್ 3ರಂದು ಪೆÇೀಲಿಯೋ ಲಸಿಕೆಯನ್ನು ಬೂತ್‍ಗಳಲ್ಲಿ ನೀಡಲಾಗುವುದು. ಇದರಲ್ಲಿ ಬಿಟ್ಟು ಹೋದ ಮಕ್ಕಳಿಗೆ ಮಾರ್ಚ್ 4 ರಿಂದ 6 ರ ವರೆಗೆ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಮನೆಗಳಿಗೆ ತೆರಳಿ ಲಸಿಕೆ ಹಾಕುವರು. ಈ ಲಸಿಕಾ ದಿನಗಳಲ್ಲಿ ಯಾವುದೇ ಸಮಸ್ಯೆಗಳಾಗದಂತೆ ಮುಂಜಾಗ್ರತೆ ವಹಿಸಬೇಕು. ಆರೋಗ್ಯ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗೆ ಅಗತ್ಯಕ್ಕೆ ತಕ್ಕಂತೆ ವಾಹನಗಳನ್ನು ಒದಗಿಸಬೇಕು ಎಂದು ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಧ್ಯಾನೇಶ್ವರ ನೀರಗುಡಿ, ಆರ್.ಸಿ.ಎಚ್. ಅಧಿಕಾರಿ ಡಾ.ಶಿವಶಂಕರ, ಡಾ.ಅನಿಲಕುಮಾರ ತಾಳಿಕೋಟಿ, ಡಾ. ರಾಜಶೇಖರ ಪಾಟೀಲ, ಡಾ. ಶಂಕ್ರೆಪ್ಪಾ ಬೊಮ್ಮಾ, ಡಾ. ದೀಪಾ ಖಂಡ್ರೆ ಇತರರಿದ್ದರು.