ಶಾಸಕ ಎಸ್.ಎ ರಾಮದಾಸ್‌ಗೆ ಕೊರೊನಾ ದೃಢ

ಮೈಸೂರು, ಏ.14: ಮಾಜಿ ಸಚಿವ ಹಾಗೂ ಕೆಆರ್ ಕ್ಷೇತ್ರದ ಶಾಸಕರಾದ ಎಸ್.ಎ ರಾಮದಾಸ್ ಅವರ ಕೊರೊನಾ ವರದಿ ಪಾಸಿಟಿವ್ ಎಂದು ಬಂದಿದೆ.
ಇಂದು ನಡೆದ ಡಾ.ಬಿ.ಆರ್ ಅಂಬೇಡ್ಕರ್ ಜಯಂತಿ ಸೇರಿದಂತೆ ಹಲವು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೊರೊನಾ ಆತಂಕ ಉಲ್ಬಣಗೊಂಡಿರುವ ಬೆನ್ನಲ್ಲೇ ಶಾಸಕ ಎಸ್.ಎ ರಾಮದಾಸ್ ಮಾಡಿರುವ ಎಡವಟ್ಟು ಜಿಲ್ಲೆಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಲ್ಲಿ ದೊಡ್ಡ ಆತಂಕ ಮೂಡಿಸಿದೆ.
ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್, ಸಂಸದ ಪ್ರತಾಪ್ ಸಿಂಹ, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೇರಿ ಜಿಲ್ಲೆಯ ಎಲ್ಲಾ ಅಧಿಕಾರಿಗಳ ಜೊತೆಗೆ ಶಾಸಕ ರಾಮದಾಸ್ ಪ್ರಾಥಮಿಕ ಸಂಪರ್ಕ ಹೊಂದಿದ್ದರು. ಇದರಿಂದಾಗಿ ರಾಮದಾಸ್ ಅವರೊಂದಿಗೆ ಸಂಪರ್ಕದಲ್ಲಿದ್ದ ಎಲ್ಲರಿಗೂ ಭೀತಿ ಶುರುವಾಗಿದೆ.