ಶಾಸಕ ಎಸ್.ಎ ರಾಮದಾಸ್‍ರಿಂದ ಒಡೆಯರ್ ಪುತ್ಥಳಿಗೆ ಪುಷ್ಪಾರ್ಚನೆ

ಮೈಸೂರು, ಜೂ.4: ಇಂದು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜಯಂತಿಯ ಶುಭ ಸಂದರ್ಭದಲ್ಲಿ ಮಾನ್ಯ ಶಾಸಕರಾದ ಎಸ್.ಎ ರಾಮದಾಸ್ ಅವರು ಕೆ.ಆರ್ ವೃತ್ತದಲ್ಲಿರುವ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪುತ್ಥಳಿಗೆ ಪುಷ್ಪಾರ್ಚನೆ ಸಲ್ಲಿಸಿದರು.
ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಅಂದಿನ ಮೈಸೂರು ರಾಜ್ಯವನ್ನು ಇಡೀ ದೇಶವೇ ತಿರುಗಿ ನೋಡುವಂತೆ ಮಾಡಿದ್ದರು ಮೈಸೂರು ಭಾಗ ಅಭಿವೃದ್ಧಿಯಲ್ಲಿ ಮಂಚೂಣಿಯಲ್ಲಿರಲು ಪ್ರಮುಖ ಕಾರಣ, ಇಲ್ಲಿನ ಭವ್ಯ ಇತಿಹಾಸ. ಇದಕ್ಕೆ ಅಡಿಪಾಯ ಹಾಕಿದವರೇ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಜೆಗಳ ಸಮಸ್ಯೆಯನ್ನು ಆಲಿಸಲು ಪ್ರಜಾಪ್ರತಿನಿಧಿ ಸಭೆಯನ್ನು ಬಲಗೊಳಿಸಿ, 1907ರಲ್ಲಿ ನ್ಯಾಯವಿಧಾಯಕ ಸಭೆಯನ್ನು ಸ್ಥಾಪಿಸಿದರು. ಸಾಮಾಜಿಕ ನ್ಯಾಯದ ಪರ ಮಹಾರಾಜರ ನಿಲುವು ಯಾವಾಗಲು ಹೆಚ್ಚಾಗಿತ್ತು. ಮೈಸೂರಿನಲ್ಲಿ ನಡೆದ ಮೀಸಲಾತಿ ಚಳುವಳಿ, ಇತಿಹಾಸದಲ್ಲೇ ಸುವರ್ಣಾಕ್ಷರಗಳಲ್ಲಿ ಬರೆದಿಡುವಂತಹದ್ದು. 1927ರಲ್ಲಿ ಮಿಲ್ಲರ್ ಆಯೋಗದ ಶಿಫಾರಸ್ಸಿನಂತೆ, ಕೆಳ ವರ್ಗದ ಜನರಿಗೆ ಶೇ 75% ಮೀಸಲಾತಿ ನೀಡಿ ಹೊಸ ಶಕೆಗೆ ಮುನ್ನುಡಿಯನ್ನಿಟ್ಟರು ನಾಲ್ವಡಿಯವರು.
ತಮ್ಮ ಕಾಲಾವಧಿಯನ್ನು ದೇವದಾಸಿ ಪದ್ದತಿಯನ್ನು ನಿರ್ಮೂಲನೆಗೊಳಿಸಿದ್ದು, ಗೆಜ್ಜೆಪೂಜೆ ಕಾರ್ಯಕ್ರಮವನ್ನು ನಿಷೇಧಿಸಿದ್ದು, ವಿಧವಾ ಶಿಕ್ಷಣಕ್ಕೆ ಪೆÇ್ರೀತ್ಸಾಹಿಸಿದ್ದು, ಮಹಿಳೆಯರಿಗೂ ಪಿತ್ರಾರ್ಜಿತ ಆಸ್ತಿಯಲ್ಲಿ ಪಾಲು ನೀಡಲು ಕಾನೂನು ರೂಪಿಸಿದ್ದರು. ನಾಲ್ವಡಿ ಕೃಷ್ಣರಾಜ ಒಡೆಯರ ಕಾಲದಲ್ಲಿ ರಾಜ್ಯದ ನಾನಾ ಭಾಗಗಳಲ್ಲಿ 270 ಉಚಿತ ಆಸ್ಪತ್ರೆಗಳು ಕಾರ್ಯಾರಂಭ ಮಾಡಿದವು .ಭದ್ರಾವತಿಯ ಮೈಸೂರು ಕಬ್ಬಿಣದ ಕಾರ್ಖಾನೆ, ಬೆಂಗಳೂರಿನ ಸಾಬೂನು ಕಾರ್ಖಾನೆ, ಮೈಸೂರಿನ ಗಂಧದೆಣ್ಣೆ ಕಾರ್ಖಾನೆ, ಸಿಮೆಂಟ್ ಕಾರ್ಖಾನೆ, ಮಂಡ್ಯದಲ್ಲಿ ಮೈಸೂರು ಸಕ್ಕರೆ ಕಂಪನಿ, ಮೈಸೂರು ಪೇಪರ್ ಮಿಲ್, ಮಂಗಳೂರು ಹೆಂಚು ಕಾರ್ಖಾನೆ, ಷಹಬಾದಿನ ಸಿಮೆಂಟ್ ಕಾರ್ಖಾನೆ, ಮೈಸೂರಿನ ಅರಗು ಮತ್ತು ಬಣ್ಣದ ಕಾರ್ಖಾನೆ, ಕೊಡಗಿನ ಕಾಫಿ ಸಂಶೋಧನಾ ಕೇಂದ್ರಗಳು ಇವರ ಕಾಲದಲ್ಲಿಯೇ ಪ್ರಾರಂಭಗೊಂಡವು.
ಏಷ್ಯಾ ಖಂಡದಲ್ಲೇ ಮೊದಲ ಬಾರಿಗೆ ಜಲ ವಿದ್ಯುತ್ ಯೋಜನೆ ಪ್ರಾರಂಭವಾಯಿತು. 1902ರಲ್ಲಿ ಕಾವೇರಿ ನದಿಗೆ ಶಿವನಸಮುದ್ರದಲ್ಲಿ ಅಡ್ಡಲಾಗಿ ಜಲ ವಿದ್ಯುತ್ ಉತ್ಪಾದನಾ ಕಾರ್ಯ ಪ್ರಾರಂಭವಾಯ್ತು. ಇಂತಹಾ ಆಳ್ವಿಕೆ ಪಡೆದ ಮೈಸೂರಿನ ಜನತೆಯೇ ಧನ್ಯರು.