ಶಾಸಕ ಕಾರ್ಯಾಲಯದಲ್ಲಿ ಅಧಿಕಾರಿಗಳ ಸಭೆ

ಲಿಂಗಸುಗೂರು.ಜೂ.೦೨-ಕ್ಷೇತ್ರದ ಅಭಿವೃದ್ಧಿ ವಿಚಾರವಾಗಿ ಶಾಸಕರ ಕಾರ್ಯಾಲಯದಲ್ಲಿ ಅಧಿಕಾರಿಗಳೊಂದಿಗೆ ಶಾಸಕಡಿ.ಎಸ್.ಹೂಲಗೇರಿ ಅವರ ನೇತೃತ್ವದಲ್ಲಿ ಸಭೆ ನಡೆಸಲಾಯಿತು.
ಈ ಸಭೆಯಲ್ಲಿ ಈ ವರ್ಷದ ಮುಂಗಾರು ಹಂಗಾಮು ಪ್ರಾರಂಭಗೊಂಡಿದ್ದು ರೈತರು ಬಿತ್ತನೆಗೆ ಪೂರ್ವಸಿದ್ಧತೆ ಕಾರ್ಯ ಚಟುವಟಿಕೆಗಳನ್ನು ನಡೆಸುತ್ತಿರುವ ಬಗ್ಗೆ, ತಾಲೂಕಿನ ರೈತರಿಗೆ ಸರಿಯಾದ ವೇಳೆಗೆ ಬಿತ್ತನೆ ಬೀಜ ಹಾಗೂ ರಸಗೊಬ್ಬರ, ಕೃಷಿ ಉಪಕರಣಗಳನ್ನು ವಿತರಿಸಲು ಎಲ್ಲಾ ಸಿದ್ಧತೆ ಮಾಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು ಮತ್ತು ಕೃಷಿ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆಗಳ ನರೇಗಾ ಕಾಮಗಾರಿಗಳ ಬಗ್ಗೆ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಸಹಾಯಕ ನಿರ್ದೇಶಕರು ಕೃಷಿ ಇಲಾಖೆ, ಸಹಾಯಕ ನಿರ್ದೇಶಕರು ತೋಟಗಾರಿಕೆ ಇಲಾಖೆ, ಕಾರ್ಯದರ್ಶಿಗಳು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಲಿಂಗಸುಗೂರು ಇವರು ಉಪಸ್ಥಿತರಿದ್ದರು.