ಶಾಸಕ ಕೆ.ಬಿ.ಅಶೋಕನಾಯ್ಕ್ ಭೇಟಿ : ವಿಶೇಷ ಪೂಜೆ ಸಲ್ಲಿಕೆ


ಶಿವಮೊಗ್ಗ, ನ. 30: ಕಾರ್ತಿಕ ಮಾಸದ ಹಿನ್ನೆಲೆಯಲ್ಲಿ, ಶಿವಮೊಗ್ಗ ತಾಲೂಕಿನ ಬಾಳೆಕೊಪ್ಪ ಗ್ರಾಮದ ಕರಿಬಸವೇಶ್ವರ ಸ್ವಾಮಿ ದೇವಸ್ಥಾನಕ್ಕೆ ಸೋಮವಾರ ಸಂಜೆ ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ಶಾಸಕ ಕೆ.ಬಿ. ಅಶೋಕ ನಾಯ್ಕ್ ಭೇಟಿ ನೀಡಿದ್ದರು. ದೀಪೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿ, ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ ಈಶ್ವರಪ್ಪ, ಮಹೇಶ್, ಬಸವರಾಜ್, ಜಗದೀಶ್, ರುದ್ರೇಶ್ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.