ಶಾಸಕ ಖಂಡ್ರೆಗೆ ಸಚಿವ ಸ್ಥಾನ ನೀಡಿ

ಭಾಲ್ಕಿ:ಮೇ.19: ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ರಚನೆ ಆಗುತ್ತಿರುವ ಹೊಸ ಸರಕಾರದಲ್ಲಿ ಕ್ಷೇತ್ರದಿಂದ ಸತತ ನಾಲ್ಕು ಬಾರಿ ಗೆಲುವು ಸಾಧಿಸಿರುವ ಈಶ್ವರ ಖಂಡ್ರೆ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಸಿದ್ರಾಮಪ್ಪ ಆಣದೂರೆ ಒತ್ತಾಯಿಸಿದ್ದಾರೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು ಈ ಹಿಂದೆ ಈಶ್ವರ ಖಂಡ್ರೆ ಅವರು ಶಾಸಕರಾಗಿ, ಸಚಿವರಾಗಿ ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ.

ವಿಶೇಷವಾಗಿ ಅವರು ಕೃಷಿ, ನೀರಾವರಿ ಕ್ಷೇತ್ರದ ಬಗ್ಗೆ ಅಪಾರ ಕಾಳಜಿ ಹೊಂದಿದ್ದಾರೆ. ಈ ಹಿಂದೆ ಕ್ಷೇತ್ರದಲ್ಲಿ ಕೃಷಿ, ನೀರಾವರಿ ಕ್ಷೇತ್ರಕ್ಕೆ ಹೆಚ್ಚು ಆದ್ಯತೆ ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯನವರ ಸಚಿವ ಸಂಪುಟದಲ್ಲಿ ಖಂಡ್ರೆ ಅವರಿಗೆ ಸಚಿವ ಸ್ಥಾನ ಕಲ್ಪಿಸಿ ಕೃಷಿ, ನೀರಾವರಿ ಕ್ಷೇತ್ರದ ಜವಾಬ್ದಾರಿ ವಹಿಸಬೇಕು ಎಂದು ಒತ್ತಾಯ ಮಾಡಿದ್ದಾರೆ.