ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ದ ಕ್ರಮಕ್ಕೆ ಆಗ್ರಹ

ರಾಯಚೂರು,ನ.೯- ಬಣಜಿಗ ಸಮಾಜದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಜಿಲ್ಲಾ ಬಣಜದ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ಮುಖಂಡರು ಪ್ರತಿಭಟನೆ ನಡೆಸಿದರು.
ವಿಜಯಪುರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ಟೋಬರ್ -೨೧ ರಂದು ಹುಕ್ಕೇರಿಯಲ್ಲಿ ನಡೆದ ಮೀಸಲಾತಿ ಪಡೆಯುವ ಕುರಿತ ಸಭೆಯಲ್ಲಿ ನಮ್ಮ ಸಮಾಜದ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದು ಖಂಡನೀಯ.ಅವರ ಮಾತಿನಿಂದ ನಮ್ಮ ಬಣಜಿಗ ಸಮಾಜದ ಮನಸ್ಸುಗಳಿಗೆ ನೋವು ಉಂಟಾಗಿದೆ.ನಮ್ಮ ಸಮಾಜದ ಕುರಿತು ಮಾತನಾಡಲು ಅವರಿಗೆ ನೈತಿಕತೆ ಇಲ್ಲ.ಜನಪ್ರತಿನಿಧಿಗಳಾಗಿ ಆಯ್ಕೆಯಾಗಿ ಸರ್ವ ಜನಾಂಗಕ್ಕೂ ಒಳಿತು ಕಲ್ಪಿಸುತ್ತೇವೆ ಎಂದು ಪ್ರಮಾಣ ವಚನ ಸ್ವೀಕರಿಸಿರುವ ಇವರು,ಬೇರೆ ಸಮಾಜದ ಕುರಿತು ಹಗುರವಾಗಿ ಮಾತನಾಡಿ ಪ್ರಚಾರ ಗಿಟ್ಟಿಸಿಕೊಳ್ಳುವ ಯತ್ನದಲ್ಲಿದ್ದಾರೆ.ಕೂಡಲೇ ಅವರು ಸಮಾಜದವರಿಗೆ ಬಹಿರಂಗವಾಗಿ ಕ್ಷಮೆ ಕೇಳಬೇಕು.ಇಲ್ಲವಾದಲ್ಲಿ ಉಗ್ರವಾದ ಹೋರಾಟವನ್ನು ಹಮ್ಮಿಕೊಳ್ಳಲಾಗುತ್ತದೆ.ಕೂಡಲೇ ಅವರ ವಿರುದ್ಧ ಸೂಕ್ತ ಕಾನೂನ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಡಾ.ಶಿವಬಸಪ್ಪ,ಉದಯಕುಮಾರ,ಶರಣಬಸಪ್ಪ ಅರಳಿ, ಡಾ.ಮಹಾಲಿಂಗಪ್ಪ, ಡಾ ಸುರೇಶ್ ಸಗರದ,ಮಲ್ಲಿಕಾರ್ಜುನ ಸೇರಿದಂತೆ ಇತರರು ಉಪಸ್ಥಿತರಿದ್ದರು.