ಶಾಸಕ ರಮೇಶ ಭೂಸನೂರ ಅವರಿಗೆ ಸಚಿವ ಸ್ಥಾನ ನೀಡಲು ಸಿಎಂ ಮುಂದಾಗಬೇಕುಃ ಶಾರದಾ ಮಂಗಳೂರ

ಸಿಂದಗಿ, ನ.8-ವಿಧಾನಸಭಾ ಉಪಚುನಾವಣೆಯಲ್ಲಿ ಜಯ ಸಾಧಿಸಿದ ಶಾಸಕ ರಮೇಶ ಭೂಸನೂರ ಅವರಿಗೆ ಸಚಿವ ಸ್ಥಾನ ನೀಡಿ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಮುಖ್ಯಮಂತ್ರಿಗಳು ಮುಂದಾಗಬೇಕೆಂದು ಬಿಜೆಪಿ ಜಿಲ್ಲಾ ಖಜಾಂಚಿ ಶಾರದಾ ರವೀಂದ್ರನಾಥ ಮಂಗಳೂರ ಒತ್ತಾಯಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ರಮೇಶ ಭೂಸನೂರ ಮೂರನೇಬಾರಿಗೆ ಗೆಲವು ಸಾಧಿಸಿ ಸಿಂದಗಿ ಕ್ಷೇತ್ರ ಬಿಜೆಪಿ ಭದ್ರಕೋಟೆ ಎಂಬುದನ್ನು ಸಾಬೀತು ಮಾಡಿದ್ದಾರೆ. ಜಿಲ್ಲೆಯ ಬಿಜೆಪಿ ಶಾಸಕರಲ್ಲಿ ರಮೇಶ ಭೂಸನೂರ ಹಿರಿಯರಾಗಿದಲ್ಲದೆ ರಾಜಕೀಯ ಕ್ಷೇತ್ರದಲ್ಲಿ ಮಂಡಲ ಪ್ರಧಾನರಾಗುವ ಮೂಲಕ ಭೂತಮಟ್ಟದಿಂದ ರಾಜಕಾರಣ ಮಾಡಿದ ಅನುಭವ ಹೊಂದಿದ ಭೂಸನೂರ ಅವರಿಗೆ ಸಚಿವ ಸ್ಥಾನ ನೀಡುವುದರ ಮೂಲಕ ವಿಜಯಪುರ ಜಿಲ್ಲೆ ಸಚಿವ ಸ್ಥಾನದಿಂದ ವಂಚಿತವಾಗಿದೆ ಎಂಬ ಹಣೆಪಟ್ಟಿ ಅಳಿಸಿ ಹಾಕಬೇಕೆಂದು ಕೋರಿದ್ದಾರೆ.