ಶಾಸಕ ರಾಜು ಕಾಗೆ ಅವರಿಗೆ ನೋಟಿಸ್ ಜಾರಿ

ಅಥಣಿ/ಚಿಕ್ಕೋಡಿ :ಮೇ.2: ಕಾಗವಾಡ ಶಾಸಕರಾದ ರಾಜು ಕಾಗೆ ಅವರು ಏ.30 ರಂದು ಮದಬಾವಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರ ಸಭೆಯ ತಮ್ಮ ಭಾಷಣದಲ್ಲಿ ಬೇರೆ ವ್ಯಕ್ತಿಯ ವೈಯಕ್ತಿಕ ವಿಷಯವನ್ನು ಪ್ರಸ್ತಾವಣೆ ಮಾಡಿರುವದರ ಕುರಿತು ಹಾಗೂ ಜುಗುಳ ಮತ್ತು ಮಂಗಾವತಿ ಗ್ರಾಮಗಳಲ್ಲಿ ಕಡಿಮೆ ಲೀಡ್ ಕೊಟ್ಟಲ್ಲಿ ಕರೆಂಟ ಕಟ್ ಎಂದು ಮತದಾರರಿಗೆ ಬೆದರಿಕೆ ಹಾಕುವ ಕುರಿತು ವಿವಿಧ ಸುದ್ಧಿ ವಾಹಿನಿಗಳಲ್ಲಿ ಬಿತ್ತರವಾಗಿರುತ್ತದೆ.
ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ಕಾಗವಾಡ ವಿಧಾನಸಭಾ ಮತಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಗಳಿಂದ ಇಪ್ಪತ್ತನಾಲ್ಕು ಗಂಟೆಯೊಳಗಾಗಿ ವಿವರಣೆ ನೀಡುವಂತೆ ಶಾಸಕರಾದ ರಾಜು ಕಾಗೆ ಅವರಿಗೆ ನೋಟಿಸ್ ಜಾರಿ ಮಾಡಲಾಗಿರುತ್ತದೆ ಎಂದು ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಚುನಾವಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.