ಶಾಸಕ ರೇವಣ್ಣ ಹಾಜರಿಗೆ ಹೈಕೋರ್ಟ್ ನೋಟೀಸ್

ಬೆಂಗಳೂರು,ಜೂ.೨- ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣದಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡೆಗಡೆಯಾಗಿರುವ ಶಾಸಕ ಎಚ್‌ಡಿ ರೇವಣ್ಣಗೆ ಹೈಕೋರ್ಟ್ ನೋಟೀಸ್ ಜಾರಿ ಮಾಡಿದೆ.
ಹೊಳೆನರಸೀಪುರ ಪೊಲೀಸ್ ಠಾಣೆ ಪಿಎಸ್‌ಐ ಅಜಯ್ ಅವರು ಇಂದು ಹರದನಹಳ್ಳಿಯ ಮನೆಯಲ್ಲಿ ರೇವಣ್ಣಗೆ ಹೈಕೋರ್ಟ್‌ನ ನೊಟೀಸ್ ಮುಟ್ಟಿಸಿದ್ದು, ನೋಟೀಸ್ ತಲುಪಿದ ಐದು ದಿನದೊಳಗೆ ಹಾಜರಾಜಗಲು ಕೋರ್ಟ್ ತಿಳಿಸಿದೆ.
ರೇವಣ್ಣ ಅವರ ಜಾಮೀನು ಪ್ರಶ್ನಿಸಿ ಎಸ್‌ಐಟಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು. ಈ ಹಿನ್ನೆಲೆಯಲ್ಲಿ ಕೋರ್ಟ್ ಇದೀಗ ರೇವಣ್ಣಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದೆ.
ಮೈಸೂರಿನ ಕೆಆರ್‌ಪೇಟೆಯಲ್ಲಿ ದಾಖಲಾಗಿರುವ ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣದಲ್ಲಿ ಎಚ್.ಡಿ. ರೇವಣ್ಣರನ್ನು ಎಸ್‌ಐಟಿ ಬಂಧಿಸಿತ್ತು. ಆದರೆ, ರೇವಣ್ಣ ಅವರು ಕೋರ್ಟ್‌ನಿಂದ ಜಾಮೀನು ಪಡೆದುಕೊಂಡು ಜೈಲಿನಿಂದ ಆಚೆಬಂದಿದ್ದರು. ಆದರೆ, ಇದೀಗ ಎಸ್‌ಐಟಿ ಅಧಿಕಾರಿಗಳು ರೇವಣ್ಣ ಅವರ ಜಾಮೀನು ಪ್ರಶ್ನಿಸಿ ಹೈಕೋರ್ಟ್ ಅರ್ಜಿ ಸಲ್ಲಿಸಿದ್ದಾರೆ. ಇದರಿಂದ ರೇವಣ್ಣಗೆ ಮತ್ತೆ ಸಂಕಷ್ಟ ಎದುರಾಗಿದೆ.
ಇನ್ನು ಇದೇ ಮಹಿಳೆಯ ಅಪಹರಣ ಪ್ರಕರಣದಲ್ಲಿ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಜಾ ಮಾಡಿದೆ. ಈ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಭವಾನಿ ರೇವಣ್ಣ ಬಂಧನಕ್ಕೆ ಮುಂದಾಗಿದ್ದಾರೆ. ಆದರೆ ಇದನ್ನು ಅರಿತ ಭವಾನಿ ರೇವಣ್ಣ ತಲೆಮರಿಸಿಕೊಂಡಿದ್ದಾರೆ.