ಶಾಸಕ ಲಕ್ಷಣ ಸವದಿ ಅವರನ್ನ ಹಾಡಿ ಹೊಗಳಿದ ಸಿಎಂ ಸಿದ್ದರಾಮಯ್ಯ

ಅಥಣಿ :ಆ.13: ತಾಲೂಕಿನ ಕೊಕಟನೂರು ಗ್ರಾಮದಲ್ಲಿ ನಡೆದ ಪಶುವೈದ್ಯಕೀಯ ಮಹಾವಿದ್ಯಾಲಯದ ಕಟ್ಟಡ ಲೋಕಾರ್ಪಣೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಶಾಸಕ ಲಕ್ಷಣ ಸವದಿ ಅವರನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ ಹಾಡಿ ಹೊಗಳಿದರು.
ಅಲ್ಲದೆ, ಶಾಸಕ ಲಕ್ಷ್ಮಣ ಸವದಿ ಮುಂದಿಟ್ಟ ಬೇಡಿಕೆಗಳನ್ನು ಹಂತಹಂತವಾಗಿ ಈಡೇರಿಸುವುದಾಗಿ ಭರವಸೆ ನೀಡಿದರು.
ಈ ವೇಳೆ ಸಿಎಂ ಸಿದ್ದರಾಮಯ್ಯ ಮಾತನಾಡಿ
ಲಕ್ಷಣ ಸವದಿ ಕಾಂಗ್ರೆಸ್‍ಗೆ ಬಂದ ಮೇಲೆ ನಮ್ಮ ಪಕ್ಷಕ್ಕೆ ಶಕ್ತಿ ಬಂದಿದೆ. ಲಕ್ಷ್ಮಣ ಸವದಿ ಬಿಜೆಪಿಯಲ್ಲಿದ್ದಾಗಲೂ ನನಗೆ ಒಳ್ಳೆಯ ಸ್ನೇಹಿತರು ಲಕ್ಷಣ ಸವದಿ ಅವರಿಂದ ಕೆಲವು ಮತಕ್ಷೇತ್ರಗಳಲ್ಲಿ
ನಾವು ಗೆಲುವು ಸಾಧಿಸಿದ್ದೇವೆ. ಶಾಸಕ ಲಕ್ಷಣ ಸವದಿಗೆ ಕಾಂಗ್ರೆಸ್ ಪರವಾಗಿ ಹಾಗೂ ನಮ್ಮ ಸರ್ಕಾರದ ಪರವಾಗಿ ಧನ್ಯವಾದ ಹೇಳುತ್ತೇನೆ,
ಶಾಸಕರಾಗಿ, ಸಚಿವರಾಗಿ ಮತ್ತು ಉಪ ಮುಖ್ಯಮಂತ್ರಿಯಾಗಿ ಲಕ್ಷ್ಮಣ ಸವದಿ ಅವರು ಸಾಕಷ್ಟು ಕೆಲಸ ಮಾಡಿದ್ದಾರೆ. ಇಂದು ಲಕ್ಷಣ ಸವದಿ ನಮ್ಮಮುಂದೆ ಇಟ್ಟ ಎಲ್ಲ ಬೇಡಿಕೆಗಳನ್ನು
ಹಂತಹಂತವಾಗಿ ಈಡೇರಿಸುತ್ತೇವೆ. ಈ ಕಾರ್ಯಕ್ರಮಕ್ಕೆ ಕಳೆದ ತಿಂಗಳೇ ಆಹ್ವಾನ ನೀಡಿದ್ದರು. ನನ್ನ ಕ್ಷೇತ್ರದಲ್ಲಿ ಅನೇಕ
ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ
ಬರಲೇಬೇಕು ಎಂದರು. ಆದರೆ ಇಲ್ಲಿ ಲಕ್ಷ್ಮಣ
ಸವದಿ ಮಾಡಿರುವ ಕೆಲಸಗಳನ್ನು ನೋಡಿ
ನನಗೆ ಆಶ್ಚರ್ಯ ಆಯಿತು ಯಾವುದೇ ಒಬ್ಬ ಜನ ಪ್ರತಿನಿಧಿಯನ್ನು ಆರಿಸಿ ಕಳಿಸಿದ ಜನರಿಗೆ ಆರ್ಥಿಕವಾಗಿ ಸಾಮಾಜಿಕವಾಗಿ ಬದಲಾವಣೆ
ತರಬೇಕು.ಮೂಲಭೂತ ಸೌಕರ್ಯ ಹಾಗೂ ಬಡವರಿಗಾಗಿ ಜನ ಪ್ರತಿನಿಧಿಗಳು ಅನೇಕ
ಕಾರ್ಯಕ್ರಮ ತರಬೇಕು ಎಂದು ಹೇಳುವ ಮೂಲಕ ಸಿದ್ದರಾಮಯ್ಯ ಅವರು ಶಾಸಕ ಲಕ್ಷ್ಮಣ
ಸವದಿ ಅವರ ಬಗ್ಗೆ ಹೊಗಳಿಕೆಯ ಮಾತುಗಳನ್ನಾಡಿದರು.
ಐದು ಗ್ಯಾರಂಟಿ ಯೋಜನೆಗಳ ಪೈಕಿ ಮೂರು ಈಗಾಗಲೇ ಈಡೇರಿಸಲಾಗಿದೆ. ಗೃಹಲಕ್ಷ್ಮೀ ಈ ಮಾಹೆಯಲ್ಲಿ ಜಾರಿಗೆ ತರಲಾಗುತ್ತಿದ್ದು, ಐದನೇ ಗ್ಯಾರಂಟಿ ಯುವ ನಿಧಿ ಯೋಜನೆಯನ್ನು ಡಿಸೆಂಬರ್ ಅಥವಾ ಜನವರಿಯಲ್ಲಿ ಜಾರಿಗೊಳಿಸಲಾಗುವುದು.
ಪ್ರಮುಖ ಸಮಾಜ ಸುಧಾರಕರ ಪೈಕಿ ಬಸವಣ್ಣ ನನಗೆ ಅತ್ಯಂತ ಇಷ್ಟವಾದ ವ್ಯಕ್ತಿ. ಆದ್ದರಿಂದ ಬಸವ ಜಯಂತಿಯ ದಿನ ಪ್ರಮಾಣವಚನ ಸ್ವೀಕರಿಸಿ ನುಡಿದಂತೆ ನಡೆದಿರುತ್ತೇವೆ. ಆದ್ದರಿಂದ ಜನರು ಮತ್ತೇ ಆಶೀರ್ವಾದ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಲಕ್ಷ್ಮಣ ಸವದಿ ಅವರು ತಮ್ಮ ಮತಕ್ಷೇತ್ರದಲ್ಲಿ ಪಶು ವೈದ್ಯಕೀಯ ಮಹಾವಿದ್ಯಾಲಯ ಲೋಕಾರ್ಪಣೆಗೊಳಿಸಿ ಎಲ್ಲ ಕಣ್ಣು ತೆರೆಯಿಸಿದ್ದಾರೆ, ರಾಜ್ಯದಲ್ಲಿ ಪಶು ಸಂಪತ್ತು ಅಧಿಕವಾಗಿದ್ದು, ಪಶು ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆಯಿಂದ ಜಾನುವಾರುಗಳ ಆರೋಗ್ಯ ರಕ್ಷಣೆಯ ಜತೆಗೆ ಕೃಷಿ ಅಭಿವೃದ್ಧಿಗೆ ಪೂರಕವಾಗಲಿದೆ.

         ಸಿದ್ದರಾಮಯ್ಯ, ಮುಖ್ಯಮಂತ್ರಿ