ಶಾಸಕ ಲಕ್ಷ್ಮಣ ಸವದಿ ಮನೆಗೆ ಎಐಸಿಸಿ ಕಾರ್ಯದರ್ಶಿ ಸುರ್ಜೆವಾಲಾ ಭೇಟಿ

ಅಥಣಿ : ಏ.26:ಎಐಸಿಸಿ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ರಣದೀಪಸಿಂಗ್ ಸುರ್ಜೆವಾಲಾ ಬೆಳಗಾವಿಯ ಸದಾಶಿವನಗರದಲ್ಲಿರುವ ಅಥಣಿ ಶಾಸಕ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ನಿವಾಸಕ್ಕೆ ಆಗಮಿಸಿ
ಬೆಳಗಿನ ಉಪಹಾರ ಸವಿದರು.
ಆನಂತರ ಶಾಸಕ ಲಕ್ಷ್ಮಣ ಸವದಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಜೊತೆ ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಗೆಲುವಿನ ರೂಪುರೇಷೆಗಳ ಕುರಿತು ಸುಧೀರ್ಘವಾಗಿ ಚರ್ಚಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಬೆಳಗಾವಿ ಶಾಸಕ ರಾಜು ಸೇಠ ಸೇರಿದಂತೆ ಮೊದಲಾದವರು ಇದ್ದರು.