ಶಾಸಕ ವೈ.ನಂಜೇಗೌಡರಿಂದ ರೋಡ್ ಶೋ, ಮತಯಾಚನೆ

ಮಾಲೂರು ಏ.೨೫ – ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಪಕ್ಷವನ್ನು ಕಿತ್ತೊಗೆದು ಸಂವಿಧಾನ ಆಶಯದಡಿ ಎಲ್ಲಾ ಜಾತಿ ಧರ್ಮಗಳಿಗೆ ಸಮಾನತೆ ಹಾಗೂ ಸಾಮಾಜಿಕ ನ್ಯಾಯವನ್ನು ನೀಡಿರುವ ಏಕೈಕ ಪಕ್ಷ ಕಾಂಗ್ರೆಸ್ ಪಕ್ಷದಿಂದ ಕೋಲಾರ ಮೀಸಲು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿರುವ ಕೆ ವಿ ಗೌತಮ್ ರವರಿಗೆ ಪಟ್ಟಣದ ಜನತೆ ಮತ ನೀಡುವ ಮೂಲಕ ಆಶೀರ್ವಾದ ಮಾಡುವಂತೆ ಶಾಸಕ ಕೆ. ವೈ.ನಂಜೇಗೌಡ ಹೇಳಿದರು.
ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಪರವಾಗಿ ಪಕ್ಷದ ಬೆಂಬಲಿಗರು ಹಾಗೂ ಕಾರ್ಯಕರ್ತರೊಂದಿಗೆ ರೋಡ್ ಶೋ ಮೂಲಕ ಮತಯಾಚಿಸಿ ಮಾತನಾಡಿ,ದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಇತಿಹಾಸವಿದೆ. ಸ್ವಾತಂತ್ರ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತ ನಡೆಸಿದಾಗಲೆಲ್ಲ ದೇಶವನ್ನು ಅಭಿವೃದ್ಧಿಪಡಿಸುವುದರ ಜೊತೆಗೆ ಎಲ್ಲಾ ಜಾತಿ ಜನಾಂಗದವರಿಗೆ ಸಂವಿಧಾನದ ಆಶಯದಡಿ ಬಡವರು ದೀನ ದಲಿತರು ಹಿಂದುಳಿದ ವರ್ಗದವರು ರೈತರು ಮಹಿಳೆಯರು ಕಾರ್ಮಿಕರಿಗಾಗಿ ಹಲವಾರು ಯೋಜನೆಗಳನ್ನು ರೂಪಿಸಿ ಕಾರ್ಯರೂಪಕ್ಕೆ ತಂದಿದೆ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆಶಯದಂತೆ ಪ್ರಜಾಪ್ರಭುತ್ವ ಉಳಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷ ಎಲ್ಲಾ ವರ್ಗದವರಿಗೂ ಸಾಮಾಜಿಕ ನ್ಯಾಯವನ್ನು ನೀಡುವದರ ಮೂಲಕ ಉತ್ತಮ ಆಡಳಿತ ನೀಡುತ್ತಾ ಬಂದಿದೆ ಆದರೆ ಕಳೆದ ಹತ್ತು ವರ್ಷಗಳಿಂದ ಬಿಜೆಪಿ ಜನಸಾಮಾನ್ಯರಿಗೆ ಸುಳ್ಳು ಭರವಸೆಗಳನ್ನು ನೀಡುವುದರ ಮೂಲಕ ಅಧಿಕಾರಕ್ಕೆ ಬಂದ ಸರ್ಕಾರ ಉದ್ಯೋಗ ಸೃಷ್ಟಿಸುವಲ್ಲಿ ವಿಫಲವಾಗಿದೆ. ಬೆಲೆ ಏರಿಕೆ ನಿಯಂತ್ರಿಸುವಲ್ಲಿ ವಿಫಲವಾಗಿದೆ. ಪೆಟ್ರೋಲ್ ಡೀಸೆಲ್ ಗ್ಯಾಸ್ ಬೆಲೆ ಗಗನಕ್ಕೇರಿದೆ ಬೆಲೆ ನಿಯಂತ್ರಣ ದೇಶದ ಅಭಿವೃದ್ಧಿಗಾಗಿ ಕೇಂದ್ರದಲ್ಲಿ ಐಎನ್‌ಡಿಐಎ ಒಕ್ಕೂಟ ಬಹುಮತ ಬರಲಿದ್ದು ರಾಹುಲ್ ಗಾಂಧಿಯವರು ಪ್ರಧಾನ ಮಂತ್ರಿ ಆಗಲಿದ್ದಾರೆ.ಕಾಂಗ್ರೆಸ್ ಭದ್ರಕೋಟೆಯಾಗಿರುವ ಕೋಲಾರ ಮೀಸಲು ಲೋಕಸಭಾ ಕ್ಷೇತ್ರದಲ್ಲಿ ಏ.೨೬ರಂದು ನಡೆಯಲಿರುವ ಲೋಕಸಭಾ ಚುನಾವಣೆಯ ಮತದಾನ ದಿನದಂದು ಪಟ್ಟಣದ ಪ್ರತಿಯೊಬ್ಬ ನಾಗರಿಕರು ಕಾಂಗ್ರೆಸ್ ಪಕ್ಷದ ಹಸ್ತದ ಗುರುತಿಗೆ ತಮ್ಮ ಅಮೂಲ್ಯವಾದ ಮತವನ್ನು ನೀಡುವುದರ ಮೂಲಕ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೆಲುವಿಗೆ ಆಶೀರ್ವಾದ ಮಾಡುವಂತೆ ತಿಳಿಸಿದರು.
ಕಾಂಗ್ರೆಸ್ ಪಕ್ಷವು ಪ್ರತಿಯೊಬ್ಬರಿಗೂ ಸಾಮಾಜಿಕ ನ್ಯಾಯವನ್ನು ದೊರಕಿಸಿ ಕೊಡುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಿದೆ ಅಲ್ಲದೆ ದೇಶದ ಅಭಿವೃದ್ಧಿಗೆ ಹಲವಾರು ಜನಪರ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ ಕಳೆದ ೧೦ ತಿಂಗಳ ಹಿಂದೆ ಆಡಳಿತಕ್ಕೆ ಬಂದ ಕಾಂಗ್ರೆಸ್ ಪಕ್ಷದ ರಾಜ್ಯ ಸರ್ಕಾರವು ನುಡಿದಂತೆ ನಡೆದಿದೆ ಚುನಾವಣಾ ಪೂರ್ವದಲ್ಲಿ ನೀಡಿದ್ದ ೫ ಗ್ಯಾರಂಟಿ ಯೋಜನೆಗಳು ಅನುಷ್ಠಾನಗೊಳಿಸಿ ಜನರ ಕಷ್ಟ ಸುಖಗಳಿಗೆ ನೆರವು ನೀಡಿದೆ ಗ್ಯಾರಂಟಿ ಯೋಜನೆಗಳ ಪಡೆಯುತ್ತಿರುವ ಫಲಾನುಭವಿಗಳು ಹಾಗೂ ಯುವಕ ಯುವತಿಯರು ದೇಶದಲ್ಲಿ ಸುಭದ್ರ ಸರ್ಕಾರ ಹಾಗೂ ಸಾಮಾಜಿಕ ನ್ಯಾಯಕ್ಕಾಗಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ರಾಜ್ಯದಲ್ಲಿ ಇಪ್ಪತ್ತಕ್ಕೂ ಹೆಚ್ಚು ಸಂಸದರನ್ನು ಗೆಲ್ಲಿಸಲಿದ್ದಾರೆ

ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಬಲಿಷ್ಠವಾಗಿದೆ ಜನರ ಪರವಾದ ಸರ್ಕಾರವಾಗಿದೆ ಗ್ಯಾರಂಟಿ ಯೋಜನೆಗಳಿಗಾಗಿ ಪ್ರತಿ ವರ್ಷ ೬೫,೦೦೦ ಕೋಟಿ ಖರ್ಚು ಮಾಡಲಾಗುತ್ತಿದೆ.
ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ೧೦ ತಿಂಗಳಲ್ಲಿ ಆಲೂರು ತಾಲೂಕಿನ ಅಭಿವೃದ್ಧಿಗೆ ೬೦೦ ಕೋಟಿಗೂ ಹೆಚ್ಚು ಅನುದಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಡುಗಡೆ ಮಾಡಿದ್ದು ಮುಂಬರುವ ದಿನಗಳಲ್ಲಿ ರಾಜ್ಯ ಸರ್ಕಾರದಿಂದ ಮತ್ತಷ್ಟು ಅನುದಾನವನ್ನು ತಂದು ಅಭಿವೃದ್ಧಿಪಡಿಸಲು ತಾಲೂಕಿನ ಜನತೆ ನನ್ನ ಕೈ ಬಲಪಡಿಸಲು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿರುವ ಅಭ್ಯರ್ಥಿ ಕೆ ವಿ ಗೌತಮ್ ರವರಿಗೆ ಹೆಚ್ಚಿನ ಮತಗಳನ್ನು ನೀಡಿ ಗೆಲ್ಲಿಸಬೇಕು.
ಕಾರ್ಯಕರ್ತರು ಮುಖಂಡರು ಬೂತ್ ಮಟ್ಟದಲ್ಲಿ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಜನಸಾಮಾನ್ಯರಿಗೆ ಪ್ರಚಾರಪಡಿಸುವ ಮೂಲಕ ಪಕ್ಷವನ್ನು ಬಲಗೊಳಿಸಿ ಅಭ್ಯರ್ಥಿಯ ಪರವಾಗಿ ಮತಯಾಚಿಸಿ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುವಂತೆ ಹೇಳಿದರು.
ಮಾಜಿ ಶಾಸಕ ಎ ನಾಗರಾಜು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂಜಿ ಮಧುಸೂದನ್ ಎಚ್‌ಎಂ ವಿಜಯನರಸಿಂಹ ಮುಖಂಡರಾದ ಆನೆಪುರ ಹನುಮಂತಪ್ಪ ಅಂಜನಿ ಸೋಮಣ್ಣ ಪ್ರದೀಪ್ ರೆಡ್ಡಿ ಸತೀಶ್ ರಾಜಣ್ಣ ಲಕ್ಕೂರ್ ಬಾಬು ಹನುಮಂತರೆಡ್ಡಿ ಅಶ್ವಥ್ ರೆಡ್ಡಿ ಪುರಸಭಾ ಸದಸ್ಯರು ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು ಹಾಜರಿದ್ದರು.