
ಬಸವನಬಾಗೇವಾಡಿ: ಮೇ.19:ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಗೆ ಸಿದ್ದತೆಗಳು ಆರಂಭವಾಗಿದ್ದು ಮೊದಲ ಹಂತದಲಿಯೇ ಕ್ಷೇತ್ರದ ಶಾಸಕ ಶಿವಾನಂದ ಪಾಟೀಲ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಕಾಂಗ್ರೆಸ್ ಮುಖಂಡ ಪ್ರಕಾಶ ದೇಸಾಯಿ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಅಹಿಂದ ನಾಯಕ ಸಿದ್ದರಾಮಯ್ಯ ಆಯ್ಕೆ ಆಗಿರುವದು ಸಂತೋಷದ ಸಂಗತಿಯಾಗಿದೆ ಅದರಂತೆ ಶಾಸಕ ಶಿವಾನಂದ ಪಾಟೀಲ ಅವರು ಸರಳ ಸ್ಜನಿಕೆಯ ರಾಜಕಾರಣಿಯಾಗಿದ್ದು ತಮ್ಮ ರಾಜಕೀಯ ಜೀವನದಲ್ಲಿ ಯಾವುದೇ ಕಪ್ಪುಚುಕ್ಕೆ ಇಲ್ಲದೆ ಪ್ರಬುದ್ದ ರಾಜಕಾರಣಿಯಾಗಿದ್ದರೆ, ಸತತವಾಗಿ ಆರು ಬಾರಿ ಶಾಸಕರಾಗಿ ಒಂದು ಬಾರಿ ಸಚಿವರಾಗಿ ಆಯ್ಕೆ ಆಗಿ ರಾಜ್ಯದಲ್ಲಿ ಪಕ್ಷಕ್ಕಾಗಿ ಶ್ರಮಿಸಿದ್ದಾರೆ ಈ ನಿಟ್ಟಿನಲ್ಲಿ ಶನಿವಾರದಂದು ನಡೆಯುವ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಶಾಸಕ ಶಿವಾನಂದ ಪಾಟೀಲ ಅವರಿಗೂ ಉನ್ನತ ಖಾತೆಯನ್ನ ನೀಡಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಹಾರಿವಾಳ, ರಾಜು ಹುಡೇದ, ಬಸಪ್ಪಾ ಮಡಿವಾಳ, ಕಾಶಿರಾಯ ಸೊನ್ನದ, ಮಲ್ಲಪ್ಪ ಹೆಗ್ಗಣ್ಣವರ, ಬಸಪ್ಪ ಮಡಿವಾಳರ, ಹಣಮಂತ ಪೂಜಾರಿ ಇದ್ದರು.