ಶಾಸಕ ಹಾಲಾಡಿಗೆ ಕೊರೊನಾ ಸೋಂಕು

ಕುಂದಾಪುರ, ಎ.೨೪- ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ.
ಕೊರೋನಾ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಶಾಸಕರು ಕೊರೋನಾ ಪರೀಕ್ಷೆಗೆ ಒಳಪಟ್ಟಿದ್ದು, ಇದೀಗ ವರದಿಯಲ್ಲಿ ಕೊರೋನಾ ಪಾಸಿಟಿವ್ ಬಂದಿದೆ. ಆದುದರಿಂದ ಶಾಸಕರು ಉಡುಪಿ ಟಿಎಂಎ ಪೈ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪೊಲೀಸ್ ಠಾಣೆಗೆ ದೂರು: ಈ ನಡುವೆ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರಿಗೆ ಕೋರೋನಾ ಪಾಸಿಟಿವ್ ವಿಚಾರವಾಗಿ ಫೇಸ್‌ಬುಕ್ ಪೋಸ್ಟ್‌ನಲ್ಲಿ ವಿಕೃತವಾಗಿ ಕಮೆಂಟ್ ಮಾಡಿದ ಜಪ್ತಿ ಗ್ರಾಮದ ನಿವಾಸಿ ಅಭಿಷೇಕ್ ಮೊಗವೀರ ವಿರುದ್ಧ ಬಿಜೆಪಿ ಪದಾಧಿಕಾರಿಗಳು ಹಾಗೂ ಶಾಸಕರ ಅಭಿಮಾನಿಗಳು ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಸಂದರ್ಭದಲ್ಲಿ ನಿಕಟಪೂರ್ವ ಮಂಡಲ ಅಧ್ಯಕ್ಷ ಸುರೇಶ್ ಶೆಟ್ಟಿ ಕಾಡೂರು, ಜಿಲ್ಲಾ ಕಾರ್ಯದರ್ಶಿ ಸದಾನಂದ ಬಳ್ಕೂರು, ಪುರಸಭಾ ಸದಸ್ಯ ಸಂತೋಷ್, ಕೆ.ಟಿ.ಸತೀಶ್ ಶೆಟ್ಟಿ, ರೈತ ಮೋರ್ಚಾ ಅಧ್ಯಕ್ಷ ಸುನಿಲ್ ಶೆಟ್ಟಿ ಹೇರಿಕುದ್ರು, ಯುವ ಮೋರ್ಚಾ ಅಧ್ಯಕ್ಷ ಅವಿನಾಶ್ ಉಳ್ತೂರು, ಪ್ರವೀಣ್ ಶೆಟ್ಟಿ ಕಡ್ಕೆ ,ನಗರ ಬಿಜೆಪಿ ಮಹಾಶಕ್ತಿ ಕೇಂದ್ರ ಅಧ್ಯಕ್ಷ ರಾಜೇಶ್ ಕಡ್ಗಿಮನೆ, ಸಚಿನ್ ಶೆಟ್ಟಿ ವಕ್ವಾಡಿ ಉಪಸ್ಥಿತರಿದ್ದರು.