ಶಾ ಬದಲಿಗೆ ರಾಹುಲ್ ಇನ್ನಿಂಗ್ಸ್ ಆರಂಭಿಸಲಿ: ಗವಾಸ್ಕರ್

ನವದೆಹಲಿ , ಡಿ 21- ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಪೃಥ್ವಿ ಷಾ ಬದಲಿಗೆ‌ ಕೆ.ಎಲ್ .ರಾಹುಲ್ ಇನ್ನಿಂಗ್ಸ್ ಆರಂಭಿಸಲಿ ಎಂದು ಕ್ರಿಕೆಟ್ ದಿಗ್ಗಜ ಸುನಿಲ್ ಗವಾಸ್ಕರ್ ಹೇಳಿದ್ದಾರೆ ‌.
ಅಡಿಲೇಡ್ ಓವಲ್ ನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಭಾರತ ಎರಡನೇ ಇನ್ನಿಂಗ್ಸ್‌ನಲ್ಲಿ ಕೇವಲ 36 ರನ್ ಗಳಿಗೆ ಸರ್ಪಪತನ ಕಂಡಿತ್ತು.
ಇದು ವ್ಯಾಪಕ ಟೀಕೆಗೆ ಗುರಿಯಾಗಿರುವ ಹಿನ್ನೆಲೆಯಲ್ಲಿ ಮುಂದಿನ ಪಂದ್ಯಕ್ಕಾಗಿ ಸಾಕಷ್ಟು ಬದಲಾವಣೆ ಮಾಡುವ ಬಗ್ಗೆಯೂ ಭಿನ್ನ ಅಭಿಪ್ರಾಯಗಳು ವ್ಯಕ್ತವಾಗುತ್ತಿದೆ.
ಮೊದಲ ಪಂದ್ಯದಲ್ಲಿ ರಾಹುಲ್ ಅವರನ್ನು ಕಣಕ್ಕಿಳಿಸಿರಲಿಲ್ಲ. ಇದರ ಬೆನ್ನಲ್ಲೇ ರಾಹುಲ್ ಇನ್ನಿಂಗ್ಸ್ ಆರಂಭಿಸಲಿ ಎಂದು ಗವಾಸ್ಕರ್ ಹೇಳಿಕೆ ನೀಡಿದ್ದಾರೆ.
ಭಾರತ ಉತ್ತಮ ಆರಂಭ ಕಂಡುಕೊಳ್ಳಬೇಕಾದರೆ ಷಾ ಬದಲಿಗೆ ರಾಹುಲ್ ಇನ್ನಿಂಗ್ಸ್ ಆರಂಭಿಸಲಿ ಎಂದು ಕಿವಿಮಾತು ಹೇಳಿದ್ದಾರೆ.
ಇಂಡಿಯಾದ ಫೀಲ್ಡಿಂಗ್ ಬಗ್ಗೆಯೂ ಮಾತನಾಡಿರುವ ಅವರು ನಾವು ಉತ್ತಮ ರೀತಿಯಲ್ಲಿ ಫೀಲ್ಡಿಂಗ್ ಹೊಂದಿದ್ದರೆ ಬಂದ ಕ್ಯಾಚ್‌ಗಳನ್ನು ಹಿಡಿಯುವ ಮೂಲಕ ಫಿಲ್ಡಿಂಗ್ ಚೆನ್ನಾಗಿ ಮಾಡಿದ್ದರೆ ದೊಡ್ಡ ಸಮಸ್ಯೆಗಳು ಬರಲಾರದು ಎಂದು ಅಭಿಪ್ರಾಯಪಟ್ಟರು.