ಶಿಕ್ಷಕರಿಗೆ ಶಾಲಾ ಸಿಬ್ಬಂದಿಗೆ ಆಹಾರ ಕಿಟ್ ವಿತರಣೆ

ಕೋಲಾರ,ಮೇ.೨೧: ಕರ್ನಾಟಕ ರಕ್ಷಣಾ ವೇದಿಕೆ ಕದಂಬ ಸೇನೆ ರಾಜ್ಯ ಸಮಿತಿ ವತಿಯಿಂದ ತಾಲೂಕಿನ ನಡುಪಳ್ಳಿ ಗ್ರಾಮದಲ್ಲಿರುವ ಜ್ಞಾನಬೋಧ ವಿದ್ಯಾಸಂಸ್ಥೆ ಅವರಣದಲ್ಲಿ ಖಾಸಗಿ ಶಾಲೆಗಳ ಶಿಕ್ಷಕರಿಗೆ ಹಾಗೂ ಸಿಬ್ಬಂದಿ ವರ್ಗಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಕದಂಬ ಸೇನೆ ರಾಜ್ಯಾಧ್ಯಕ್ಷ ಡಾ. ಸೋಮಶೇಖರ್ ಅವರಿಂದ ಆಹಾರ ದಿನಸಿ ಕಿಟ್ ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕರೋನಾ ಮಹಾಮಾರಿಯಿಂದ ತತ್ತರಿಸಿ ಹೋಗಿರುವ ಬಡ ಕುಟುಂಬಗಳಿಗೆ ಹಾಗೂ ಖಾಸಗಿ ಶಾಲೆಯ ಶಿಕ್ಷಕರಿಗೆ ಸಿಬ್ಬಂದಿಗೆ ದಿನಸಿ ಕಿಟ್ ವಿತರಿಸಿದ್ದು, ಮುಂದಿನ ದಿನಗಳಲ್ಲಿ ಸಂಕಷ್ಟದಲ್ಲಿ ಇರುವ ಶ್ರಮಿಕ ಕಾರ್ಮಿಕ ವರ್ಗಕ್ಕೆ ಹಂತ ಹಂತವಾಗಿ ಜಿಲ್ಲೆಯಾದ್ಯಂತ ದಿನಸಿ ಕಿಟ್ ವಿತರಣೆ ಮಾಡುತ್ತೆನೆ ಎಂದು ತಿಳಿಸಿದರು. ಸಹೃದಯ ದಾನಿಗಳು ಸಹ ನಮ್ಮ ಸಂಸ್ಥೆಯೊಂದಿಗೆ ಸಹಕರಿಸಬೇಕು ಜಿಲ್ಲೆಯಲ್ಲಿ ಇರುವ ಎಲ್ಲಾ ದಾನಿಗಳು ಇಂತಹ ಸಮಾಜ ಸೇವೆಯನ್ನು ಮಾಡಿ ಬಡಜನರ ಸೇವೆ ಮಾಡಬೇಕು ಎಂದು ಮನವಿ ಮಾಡಿದರು.
ಕರೋನಾ ೨ನೇ ಅಲೆಯಿಂದ ಬಡವರ, ಶ್ರಮಿಕರ ಜೀವನ ದುಸ್ಥರವಾಗಿದೆ. ಇಂತಹ ಸಂದರ್ಭದಲ್ಲಿ ಉಳ್ಳವರು ತಮ್ಮ ಕೈಲಾದ ಸಹಾಯ ಹಸ್ತ ಚಾಚುವ ಮೂಲಕ ಮಾನವೀಯತೆಯನ್ನು ಮರೆಯಬೇಕಾಗಿರುವುದು ನಮ್ಮೆಲ್ಲರ ಕರ್ತವ್ಯ. ಈ ನಿಟ್ಟಿನಲ್ಲಿ ತಮ್ಮ ಕೈಲಾದ ಸಹಾಯವನ್ನು ಮಾಡುತ್ತಿರುವುದಾಗಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಕೋಲಾರ ಜಿಲ್ಲಾ ಖಾಸಗಿ ಶಿಕ್ಷಣ ಸಂಸ್ಥೆಗಳ ಜಿಲ್ಲಾಧ್ಯಕ್ಷ ಎ.ಸದಾನಂದ, ಜಿಲ್ಲಾ ಉಪಾಧ್ಯಕ್ಷ ನಾಗಭೂಷಣ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಗದೀಶ್, ಕರ್ನಾಟಕ ರಾಜ್ಯ ಜಾನಪದ ಕಲಾವಿದರ ಒಕ್ಕೂಟದ ಅಧ್ಯಕ್ಷ ಮತ್ತಿಕುಂಟೆ ಕೃಷ್ಣ, ಅಂಬೇಡ್ಕರ್ ನಗರ ಸೋಮಣ್ಣ, ರಕ್ಷಣಾ ವೇದಿಕೆಯ ಯುವ ಘಟಕದ ಜಿಲ್ಲಾಧ್ಯಕ್ಷ ದಿಂಬಚಾಮನಳ್ಳಿ ಅಂಬರೀಶ್, ರೇಣುಕಾ ಯಲ್ಲಮ್ಮ ಬಳಗದ ಪಾರೇಹೊಸಳ್ಳಿ ರಮೇಶ್, ದಲಿತ ಯುವ ಮುಖಂಡ ಮೋಚಿಪಾಳ್ಯ ನಾಗೇಶ್, ಯುವರಾಜ್, ಹೇಮಂತ್ ರಾಜ್ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ೧೫೦ ಜನಕ್ಕೆ ಕಿಟ್ ವಿತರಣೆ ಮಾಡಲಾಯಿತು.