
(ಸಂಜೆವಾಣಿ ವಾರ್ತೆ)
ಬಳ್ಳಾರಿ:ಸೆ,5- ಶಿಕ್ಷಕರು ದೇಶದ ಶಿಲ್ಪಿಗಳು. ದೇಶದ ಭವಿಷ್ಯ ತರಗತಿ ಕೊಠಡಿಯಲ್ಲಿ ನಿರ್ಮಾಣವಾಗುತ್ತದೆ.ಆದ್ದರಿಂದ ಶಿಕ್ಷಕರು ವಿದ್ಯಾರ್ಥಿಗಳಿಗೆ ಉತ್ತಮ ಮಾರ್ಗದರ್ಶಕರಾಗಬೇಕೆಂದು ಕರ್ನಾಟಕ ರಾಜ್ಯ ಕ್ರಿಯಾಶೀಲ ಶಿಕ್ಷಕರ ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ರವಿಚೇಳ್ಳಗುರ್ಕಿ ಹೇಳಿದರು.
ಅವರು ಇಂದು
ತಾಲ್ಲೂಕಿನ ಸಂಜೀವರಾಯನಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಡಾ.ಸರ್ವೇಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.
ವಿದ್ಯಾರ್ಥಿಗಳು ರಾಧಾಕೃಷ್ಣನ್ ಅವರ ಆದರ್ಶಗಳನ್ನು ಮೈಗೂಡಿಸಿ ಕೊಳ್ಳುವುದರ ಜತೆಗೆ ತಾತ್ವಿಕ ವಿಚಾರಗಳ ಕಡೆ ಗಮನ ಹರಿಸಬೇಕು ಎಂದು ಹೇಳಿದರು.
ವಿವಿಧ ಸಂಘಗಳ ವಿದ್ಯಾರ್ಥಿ ನಾಯಕರನ್ನೇ ಶಿಕ್ಷಕರನ್ನಾಗಿ ವೇದಿಕೆ ಮೇಲೆ ಕೂಡಿಸಿದ್ದು ವಿಶೇಷವಾಗಿತ್ತು.
ಹಿರಿಯ ಶಿಕ್ಷಕರಾದ ವಿ.ಬಸವರಾಜ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.
ಶಿಕ್ಷಕರಾದ ದಿಲ್ಷಾದ್ ಬೇಗಂ, ಮೋದಿನ್ ಸಾಬ್,ಚನ್ನಮ್ಮ, ಸುಮತಿ, ಸುಧಾ, ವೈಶಾಲಿ, ಶ್ವೇತಾ, ಉಮ್ಮೆಹಾನಿ, ರಾಮಾಂಜಿನೇಯ,ವಿದ್ಯಾರ್ಥಿ ಪ್ರತಿನಿಧಿ ಮಹೇಶ ಮುಂತಾದವರು ಉಪಸ್ಥಿತರಿದ್ದರು.