ಶಿಕ್ಷಕರು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದರ ಜೊತೆಗೆ ಸಂಸ್ಕಾರ ನೀಡಲು ಕರೆ


(ಸಂಜೆವಾಣಿ ಪ್ರತಿನಿಧಿಯಿಂದ)
ಬಳ್ಳಾರಿ, ಮಾ,10- : ಶಿಕ್ಷಕರು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದರ ಜೊತೆಗೆ ಸಂಸ್ಕಾರ ನೀಡಬೇಕು. ಪ್ರತಿಯೊಂದು ಮಗುವಿನಲ್ಲೂ ಒಂದಿಲ್ಲೊಂದು ಪ್ರತಿಭೆ ಅಡಕವಾಗಿರುತ್ತದೆ,ಅದನ್ನು ಗುರುತಿಸಿ ಹೊರತೆಗೆಯುವ ಗುರುತರ ಜವಾಬ್ದಾರಿ ನಿಮ್ಮ ಮೇಲಿದೆ ಎಂದು ರಂಗಭೂಮಿ ಕಲಾವಿದರಾದ ಪುರುಷೋತ್ತಮ ಹಂದ್ಯಾಳು ಹೇಳಿದರು.
ತಾಲ್ಲೂಕಿನ ಸಂಜೀವರಾಯನಕೋಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ನಾಟಕ ರಾಜ್ಯ ಕ್ರಿಯಾಶೀಲ ಶಿಕ್ಷಕರ ವೇದಿಕೆ ಬಳ್ಳಾರಿ ಜಿಲ್ಲಾ ಘಟಕದಿಂದ ಹಮ್ಮಿಕೊಂಡಿದ್ದ ಶಾರದಾ ಪೂಜೆ ಹಾಗೂ ಉತ್ತಮ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮೇಲಿನಂತೆ ಹೇಳುವುದರ ಜೊತೆ ಪೋಷಕರು ಕೂಡ ತಮ್ಮ ಮಕ್ಕಳ ಮೇಲೆ ವಿಶೇಷ ಗಮನ ಹರಿಸಬೇಕು. ಎಂದು ಹೇಳಿದರು.
ಹಲಕುಂದಿ ಸರ್ಕಾರಿ ಪ್ರೌಢ ಶಾಲೆ ಮುಖ್ಯ ಗುರುಗಳಾದ ತಿಪ್ಪೇಸ್ವಾಮಿ,ಎತ್ತಿನಬೂದಿಹಾಳ್ ಸರ್ಕಾರಿ ಪ್ರೌಢಶಾಲೆ ಗಣಿತ ಶಿಕ್ಷಕ ದಿಲೀಪ್. ಎಸ್. ಕೆ, ಬುರನಾಯಕನಹಳ್ಳಿ ಮುಖ್ಯ ಗುರು ಮಧುಮಾಲತಿ, ಮಿಂಚೇರಿ ಶಾಲೆಯ ಶಿಕ್ಷಕಿ ಶಾರದಾ ಹಾಗೂ ಹೊನ್ನಳ್ಳಿ ಶಾಲೆಯ ಶಿಕ್ಷಕ ಬಾಷಾ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು.
ಗ್ರಾಮ ಪಂಚಾಯಿತಿ ಅಧ್ಯಕ್ಷ ವಿ.ಹನುಮಂತಪ್ಪ, ಊರಿನ ಪ್ರಮುಖರಾದ ಜಗಲಿ ದೇವರಾಜ, ಆರ್. ಸೋಮಶೇಖರ ಗೌಡ,ಎಸ್. ಡಿ.ಎಂ.ಸಿ.ಅಧ್ಯಕ್ಷ ದೊಡ್ಡ ಕುಮಾರ,ಗ್ರಾಮ ಪಂಚಾಯಿತಿ ಸದಸ್ಯರಾದ ತಿಮ್ಮನಗೌಡ,ಹೊನ್ನೂರಪ್ಪ,ಕೆ.ಪಿ. ಸುಂಕಣ್ಣ,ಪರಮೇಶ್ವರಪ್ಪ,ಶಾಲಾ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತರು ಉಪಸ್ಥಿತರಿದ್ದರು. ವೇದಿಕೆ ಅಧ್ಯಕ್ಷ ರವಿಚೇಳ್ಳಗುರ್ಕಿ ಎಲ್ಲರನ್ನೂ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.