ಶಿಕ್ಷಕರು ವಿದ್ಯಾರ್ಥಿಗಳನ್ನು ಸಂಪನ್ಮೂಲ ವ್ಯಕ್ತಿಗಳನ್ನಾಗಿ ಬೆಳಸಬೇಕು

ರಾಯಚೂರು.ಜ.೧೪-ಶಿಕ್ಷಕರು ವಿದ್ಯಾರ್ಥಿಗಳನ್ನು ಸಂಪನ್ಮೂಲ ವ್ಯಕ್ತಿಗಳನ್ನಾಗಿ ಬೆಳಸಬೇಕು, ಈ ಜವಾಬ್ದಾರಿ ಶಿಕ್ಷಣ ಸಂಸ್ಥೆ ಮತ್ತು ಶಿಕ್ಷಕರ ಮೇಲಿದೆ ಎಂದು ಹೇಳಿದರು. ಅವರು ರಾಯಚೂರು ವಿಶ್ವವಿದ್ಯಾಲಯ, ರಾಯಚೂರು ಹಾಗೂ ಲಕ್ಷ್ಮೀ ವೆಂಕಟೇಶ ದೇಸಾಯಿ ಮಹಾವಿದ್ಯಾಲಯಗಳ ಸಂಯುಕ್ತಾಶ್ರಯದಲ್ಲಿ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡ ’ರಾಷ್ಟ್ರೀಯ ಶಿಕ್ಷಣ ನೀತಿ’ಯ ಒಂದು ದಿನದ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು. ನಮ್ಮ ಪ್ರಾಚೀನ ಶಿಕ್ಷಣ ವ್ಯವಸ್ಥೆಯನ್ನು ಅವಲೋಕಿಸಿದಾಗ ಪ್ರಶ್ನೆ ಕೇಳುವುದರ ಮೂಲಕ ಹೊಸ ಹೊಸ ವಿಚಾರಗಳನ್ನು ತಿಳಿದುಕೊಳ್ಳುವ ಪರಂಪರೆ ಇರುವುದು ತಿಳಿದು ಬರುತ್ತದೆ ಎಂದು ಹೇಳಿ ಕಾರ್ಯಗಾರಕ್ಕೆ ಶುಭ ಕೋರಿದರು.
ಕಾರ್ಯಕ್ರಮದಲ್ಲಿ ಅತಿಥಿಗಳು, ಪ್ರಾಚಾರ್ಯರಾದ ಡಾ. ವೆಂಕಟೇಶ ಬಿ. ದೇವರು ಮಾತನಾಡಿ ’ರಾಷ್ಟ್ರೀಯ ಶಿಕ್ಷಣ ನೀತಿ’ ಈ ವರ್ಷ ಆರಂಭವಾಗಿದೆ. ಆದ್ದರಿಂದ ಅದರ ಸ್ವರೂಪ, ಧೋರಣೆ ಗುರಿಯ ಕುರಿತು ವಿದ್ಯಾರ್ಥಿಗಳಲ್ಲಿ ಅರವು ಮೂಡಿಸುವಲ್ಲಿ ಕಾರ್ಯಗಾರ ಮಹತ್ವದ ಪಾತ್ರ ವಹಿಸುತ್ತದೆ. ವಿಶ್ವವಿದ್ಯಾಲಯ ಈ ಕಾರ್ಯಗಾರ ನಮ್ಮ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿರುವುದಕ್ಕೆ ವಿಶ್ವವಿದ್ಯಾಲಯಕ್ಕೆ ಕೃತಜ್ಞತೆಯನ್ನು ಸಲ್ಲಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಹಾವಿದ್ಯಾಲಯದ ವ್ಯವಸ್ಥಾಪಕ ಮಂಡಳಿಯ ಕಾರ್ಯದರ್ಶಿಗಳಾದ ಜಟ್ರಂ ಶ್ರೀನಿವಾಸ ಅವರು “ವಿಶ್ವವಿದ್ಯಾಲಯವು ಈ ಕಾರ್ಯಗಾರವನ್ನು” ನಮ್ಮ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದೆ. ವಿದ್ಯಾರ್ಥಿಗಳು ಈ ಕಾರ್ಯಗಾರದ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿ ಶುಭಕೋರಿದರು. ಈ ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಡಾ. ಬಸವರಾಜೇಶ್ವರಿ ಆರ್. ಪಾಟೀಲ್, ಸಹಾಯಕ ಪ್ರಾಧ್ಯಾಪಕರು, ರಾಜ್ಯಶಾಸ್ತ್ರ ವಿಭಾಗ, ಸರಕಾರಿ ಪ್ರಥಮ ದರ್ಜೆ ಕಾಲೇಜು, ಕಲಘಟಗಿ ಹಾಗೂ ಡಾ.ಬಿ.ಸರೋಜ, ಸಹಪ್ರಾಧ್ಯಾಪಕರು, ರಾಜ್ಯಶಾಸ್ತ್ರ ವಿಭಾಗ, ಎಸ್.ಎಸ್.ಎ. ಸರಕಾರಿ ಪ್ರಥಮ ದರ್ಜೆ ಕಾಲೇಜು, ಬಳ್ಳಾರಿ ಇವರು ಆಗಮಿಸಿದ್ದರು.
ಕಾರ್ಯಕ್ರಮವು ರಾಘವೇಂದ್ರ ಸಿ.ಎನ್. ಇವರ ಪ್ರಾರ್ಥನೆಯೊಂದಿಗೆ ಆರಂಭವಾಯಿತು. ಮೆಹಮೂದ್ ಟಿ. ಉಪ-ಪ್ರಾಚಾರ್ಯರು ಅತಿಥಿಗಳನ್ನು ಸ್ವಾಗತಿಸಿದರು, ಡಾ.ಜಯತೀರ್ಥ ಎನ್.ಎಸ್., ಸಂಚಾಲಕರು, ಐ.ಕ್ಯೂ.ಎ.ಸಿ. ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಡಾ. ಕಮಲಾ ನವರತ್ನ, ರೇಖಾ ಪಾಟೀಲ್ ಸಂಪನ್ಮೂಲ ವ್ಯಕ್ತಿಗಳ ಪರಿಚಯ ಮಾಡಿಕೊಟ್ಟರು. ಡಾ.ಶೀಲಾದಾಸ ಕಾರ್ಯಕ್ರಮ ನಿರೂಪಿಸಿದರು. ಡಾ.ಅಂಜನೇಯ ಓಬಳೇಶ, ಉಪ-ಪ್ರಾಚಾರ್ಯರ ವಂದನಾರ್ಪಣೆಯೊಂದಿಗೆ ಕಾರ್ಯಕ್ರಮ ಸಂಪನ್ನಗೊಂಡಿತು.
ಈ ಕಾರ್ಯಕ್ರಮದಲ್ಲಿ ಬಿ.ಎ., ಬಿ.ಎಸ್‌ಸಿ. ಮತ್ತು ಬಿಸಿಎ ಪ್ರಥಮ ಸೆಮಿಸ್ಟರ್ ವಿದ್ಯಾರ್ಥಿಗಳು, ಬೋಧಕ-ಬೋಧಕೇತರ ಸಿಬ್ಬಂದಿಯವರು ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಿದರು.