
ಸಂಜೆವಾಣಿ ವಾರ್ತೆ
ಹೊಸಪೇಟೆ ಸೆ3: ಶಿಕ್ಷಕರ ಅರ್ಹತಾ ಪರೀಕ್ಷೆಯ ವಿಜಯನಗರ ಜಿಲ್ಲೆಯಲ್ಲಿಯೂ ಶಾಂತಿಯುತವಾಗಿ ಆರಂಭವಾಗಿದೆ ಎಂದು ಜಿಲ್ಲಾಧಿಕಾರಿ ದಿವಾಕರ ತಿಳಿಸಿದರು.
ಹೊಸಪೇಟೆಯ ಸರ್ಕಾರಿ ಬಾಲಕೀಯರ ಪದವಿಪೂರ್ವ ಕಾಲೇಜು ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದ ಅವರು ಮಾತನಾಡಿ ಜಿಲ್ಲಾ ಕೇಂದ್ರ ಹೊಸಪೇಟೆಯಲ್ಲಿ 16 ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದೆ. ಮೊದಲ ಅವಧಿಗೆ ನಡೆಯುವ ಪರೀಕ್ಷೆಯಲ್ಲಿ 12 ಕೇಂದ್ರಗಳಿಂದ 3651 ಪರೀಕ್ಷಾರ್ಥಿಗಳು ಅರ್ಹತಾ ಪರೀಕ್ಷೆಗೆ ಬರೆಯಲಿದ್ದಾರೆ.
ಮಧ್ಯಾಹ್ನ ಎರಡನೇ ಅವಧಿಯ ಪರೀಕ್ಷೆಗಳು ಎಲ್ಲಾ 16 ಕೇಂದ್ರಗಳಲ್ಲಿ ಆರಂಭವಾಗತ್ತಿದ್ದು 5116 ಪರೀಕ್ಷಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಆರೋಗ್ಯ ಇಲಾಖೆಯಿಂದ ಆರೋಗ್ಯ ತಪಾಸಣೆ, ಎಲೆಕ್ಟ್ರಾನಿಕ್ ಉಪಕರಣಗಳು, ಮೊಬೈಲ್ ನಿರ್ಭಂದಿಸಿದ ಹಿನ್ನೆಲೆಯಲ್ಲಿ ಕೊಠಡಿಯ ಹೊರಗೆಇಡಲಾಗಿತ್ತು.
ಪರೀಕ್ಷಾ ಕೇಂದ್ರದ ಹೊರಗೆ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ, ಅಕ್ರಮಕ್ಕೆ ಅವಕಾಶ ನೀಡದಂತೆ ಪೊಲೀಸ ಬಂದೋಬಸ್ತ್ ಆಯೋಜಿಸಲಾಗಿತು. ಎಲ್ಲಾ ಕೇಂದ್ರಗಳಲ್ಲಿಯೂ ಶಾಂತಿಯುತವಾಗಿ ಪರೀಕ್ಷೆಗಳು ಆರಂಭವಾಗಿವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.