ಶಿಕ್ಷಕರ ಧ್ವನಿಯಾಗಲು ಕಾಂಗ್ರೆಸ್ ಬೆಂಬಲಿಸಿ

ಕೋಲಾರ:೨೯- ಸದನದಲ್ಲಿ ಶಿಕ್ಷಕರ ಸಮಸ್ಯೆಗಳಿಗೆ ಧ್ವನಿಯಾಗಿ ಪ್ರಶ್ನೆ ಮಾಡಲು ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಿ.ಟಿ ಶ್ರೀನಿವಾಸ್ ಅವರಿಗೆ ಶಿಕ್ಷಕರು ಪ್ರಥಮ ಪ್ರಾಶಸ್ತದ ಮತ ನೀಡಿ ಗೆಲ್ಲಿಸುವಂತೆ ಶಾಸಕ ಕೊತ್ತೂರು ಜಿ. ಮಂಜುನಾಥ್ ಮನವಿ ಮಾಡಿದರು.
ಅಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಸೋಮವಾರ ನಗರದಲ್ಲಿ ವಿವಿಧ ಶಾಲಾ-ಕಾಲೇಜುಗಳಿಗೆ ಭೇಟಿ ನೀಡಿ ಮತಯಾಚನೆಯಲ್ಲಿ ಮಾತನಾಡಿದ ಅವರು ಸುಮಾರು ೧೮ ವರ್ಷಗಳಿಂದ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾಗಿ ಸರಕಾರದಲ್ಲಿ ಪ್ರಭಾವಿಯಾಗಿದ್ದರೂ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಿಲ್ಲ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರವಿದ್ದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೆದ್ದಾಗ ಸಮಸ್ಯೆಗಳಿಗೆ ಸ್ಪಂದನೆ ಸಿಗುತ್ತದೆ ಕಾಂಗ್ರೆಸ್ ಅಭ್ಯರ್ಥಿ ಸ್ವತಃ ಶಿಕ್ಷಣ ಸಂಸ್ಥೆಗಳನ್ನು ಹೊಂದಿದ್ದು ಶೈಕ್ಷಣಿಕ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಅರಿವು ಇದ್ದು ಆಯ್ಕೆಯಾದರೆ ನಮ್ಮೊಂದಿಗೆ ಜೊತೆಯಾಗಿ ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರವು ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಿಗೆ ಹೆಚ್ಚಿನ ಅಧ್ಯತೆಯನ್ನು ನೀಡಿದ್ದಾರೆ ಕಾಂಗ್ರೆಸ್‌ಅಭ್ಯರ್ಥಿ ಆಯ್ಕೆಯಾದರೆ ಶಿಕ್ಷಕರ ನಿರೀಕ್ಷೆ ಹುಸಿಯಾಗದಂತೆ ರಾಜ್ಯದಲ್ಲಿ ನಿಮ್ಮಗಳ ಧ್ವನಿಯಾಗಿ ಕೆಲಸ ಮಾಡಲಿದ್ದಾರೆ ಕಾಂಗ್ರೆಸ್‌ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಶಿಕ್ಷಣ ಕ್ಷೇತ್ರದಲ್ಲಿ ಅನೇಕ ಬದಲಾವಣೆಗಳಾಗಿವೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣದ ಪಠ್ಯಕ್ರಮದಲ್ಲಿ ಅನೇಕ ಬದಲಾವಣೆಯನ್ನು ತರಲಾಗಿದೆ ವಿದ್ಯಾಸಿರಿ ಯೋಜನೆ ಜಾರಿಗೆ ತಂದು ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿದ್ದಾರೆ. ೫ ಗ್ಯಾರಂಟಿ ಯೋಜನೆಗಳನ್ನು ಎಲ್ಲ ಜನರಿಗೂ ತಲುಪಿಸಲು ಕ್ರಮವಹಿಸಲಾಗಿದೆ. ಮಹಿಳಾ ಶಿಕ್ಷಕಿಯರಿಗೂ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಎಂಎಲ್ಸಿ ಪುಟ್ಟಣ್ಣ ಮಾತನಾಡಿ ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸಲು ರಾಜ್ಯ ಸರ್ಕಾರ ಪ್ರಾಮಾಣಿಕ ಪ್ರಯತ್ನಗಳನ್ನು ನಡೆಸಿದೆ ಡಿ.ಟಿ ಶ್ರೀನಿವಾಸ್ ಅವರು ವಿಧಾನ ಪರಿಷತ್‌ಸದಸ್ಯರಾಗಿ ಈ ಕ್ಷೇತ್ರದಲ್ಲಿ ಉತ್ತಮ ಕೆಲಸಗಳನ್ನು ನಡೆಸಲು ಯೋಜನೆಗಳನ್ನು ರೂಪಿಸಲಾಗಿದೆ ಶಿಕ್ಷಕರ ಸಮಸ್ಯೆಗಳಿಗೆ ಸದಾ ಸ್ಪಂದಿಸಿ ಕಾರ್ಯನಿರ್ವಹಿಸುತ್ತಾರೆ ಹಾಗಾಗಿ ಅವರನ್ನು ಎಂಎಲ್ಸಿ ಯಾಗಿ ಆಯ್ಕೆ ಮಾಡಿ ನಿಮ್ಮ ಸೇವೆ ಮಾಡಲು ಅವಕಾಶ ನೀಡುವಂತೆ ಮನವಿ ಮಾಡಿದರು.
ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ ೭ನೇ ವೇತನ ಜಾರಿಗೂ ಮುಂದಾಗಿದೆ ಐದು ಜಿಲ್ಲೆಯಲ್ಲಿ ಸುಮಾರು ೨೫ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರಿದ್ದು ಶಿಕ್ಷಕರ ಹಿತ ಕಾಯುವ ಕೆಲಸ ಮಾಡಿದ್ದಾರೆ. ಆದ್ದರಿಂದ ಈ ಬಾರಿ ಕಾಂಗ್ರೆಸ್ ಗೆಲ್ಲುವ ವಿಶ್ವಾಸವಿದೆ ಎಂದರು.
ಈ ಸಂದರ್ಭದಲ್ಲಿ ಸಹ್ಯಾದ್ರಿ ಕಾಲೇಜಿನ ಉದಯಕುಮಾರ್, ಎಸ್.ಡಿ.ಸಿ ಕಾಲೇಜಿನ ಉಷಾ ಗಂಗಾಧರ್, ಮಹಿಳಾ ಸಮಾಜ ನವೀನಾ, ಬೆಂಗಳೂರು ವಿವಿ ಸಿಂಡಿಕೇಟ್ ಸದಸ್ಯ ಎಕ್ಸ್ ಲೆಂಟ್ ರಂಗಪ್ಪ, ಬಂಗಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೀಸಂದ್ರ ಗೋಪಾಲಗೌಡ,, ನಗರಸಭೆ ಮಾಜಿ ಅಧ್ಯಕ್ಷ ಪ್ರಕಾಶ್, ಹಾಲಿ ಸದಸ್ಯ ಅಂಬರೀಶ್, ಕೋಚಿಮುಲ್ ನಿರ್ದೇಶಕ ಯೂಸುಫ್ ಷರೀಫ್, ವಕ್ಕಲೇರಿ ಗ್ರಾಪಂ ಮಾಜಿ ಅಧ್ಯಕ್ಷರಾದ ವಕ್ಕಲೇರಿ ರಾಜಪ್ಪ, ಮೈಲಾಂಡಹಳ್ಳಿ ಮುರಳಿ, ಮುಖಂಡರಾದ ಮಲೇಷಿಯಾ ರಾಜಕುಮಾರ್, ವೈ ಶಿವಕುಮಾರ್, ಜನಪನಹಳ್ಳಿ ನವೀನ್ ಕುಮಾರ್, ಪರ್ಜೇನಹಳ್ಳಿ ನಾಗೇಶ್ ಸೇರಿದಂತೆ ವಿವಿಧ ಶಾಲಾ ಕಾಲೇಜುಗಳ ಶಿಕ್ಷಕರು ಇದ್ದರು