ಶಿಕ್ಷಕರ ನಿಯೋಜನೆಗೆ ಒತ್ತಾಯಿಸಿ ಬಿಇಓಗೆ ಮನವಿ

ಸಂಜೆವಾಣಿ ವಾರ್ತೆ

ಜಗಳೂರು.ಆ.೩ ; ತಾಲೂಕಿನ ಹೊರಕೆರೆಯ ಸರ್ಕಾರಿ ಕನ್ನಡ ಮಾದರಿ ಹಿರಿಯ ಪ್ರಾಥಮಿಕ  ಶಾಲೆಯಲ್ಲಿ ಸುಮಾರು 125 ಜನ ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದು ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಗುಣವಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರ ಸಂಖ್ಯೆ ಕಡಿಮೆ ಇದ್ದು ಪ್ರಸ್ತುತ ನಾಲ್ಕು ಜನ ಶಿಕ್ಷಕರು ಕರ್ತವ್ಯ ನಿರ್ವಹಿಸುತ್ತಿದ್ದು ಶೈಕ್ಷಣಿಕ ಹಿತ ದೃಷ್ಟಿಯಿಂದ ಹಾಗೂ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಉತ್ತಮ ಶಿಕ್ಷಣ ನೀಡಲು ಒಬ್ಬ ಶಿಕ್ಷಕರನ್ನು ಅಥವಾ ಹೆಚ್ಚುವರಿ ಶಿಕ್ಷಕರನ್ನು ನಿಯೋಜನೆ ಮಾಡ ಬೇಕೆಂದು ಹೊರಕೆರೆ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುವಂತಹ ಮಕ್ಕಳ ಪೋಷಕರು ಕ್ಷೇತ್ರಶಿಕ್ಷಣಾಧಿಕಾರಿಗಳಾದ ಸುರೇಶ ರೆಡ್ಡಿಗೆ ಮನವಿ ಮಾಡಿದರುಈ ಸಂದರ್ಭದಲ್ಲಿ ಎಸ್‌ಡಿಎಂಸಿ ಅಧ್ಯಕ್ಷರಾದ ಪ್ರಕಾಶ್. ಪಟ್ಟಣ ಪಂಚಾಯತಿ ಸದಸ್ಯರಾದ ಓಬಳೇಶ್ ಹಾಗೂ ಎಸ್.ಡಿ.ಎಂ.ಸಿ ಸದಸ್ಯರಾದ ಕಿರಣ್ ಕುಮಾರ್ ಡ್ರೈವರ್ ರಾಜು. ಮಾಜಿ ಕನ್ನಡ ರಕ್ಷಣಾ ವೇದಿಕೆ ಅಧ್ಯಕ್ಷೆ ತಿಪ್ಪಮ್ಮ. ಮಂಜುಳ. ಪ್ರಕಾಶ್. ಸೇರಿದಂತೆ. ಪೋಷಕರು. ದಲಿತ ಸಂಘರ್ಷ ಸಮಿತಿ ತಾಲೂಕ್ ಅಧ್ಯಕ್ಷ ಮಲೆ ಮಾಚಿಕೆರೆ ಸತೀಶ್ ಮತ್ತಿತರರು ಉಪಸ್ಥಿತರಿದ್ದರು