ಶಿಕ್ಷಕರ ವ್ಯಕ್ತಿತ್ವ ನಿರ್ಮಾಣದಲ್ಲಿ ಶಿಕ್ಷಕ ತರಬೇತಿ ಸಂಸ್ಥೆಗಳ ಪಾತ್ರ ಮಹತ್ತರ : ಡಾ. ಪರಮೇಶ್ವರ ನಾಯಕ

ಬೀದರ್ ಏ 29 ಃ ಶಿಕ್ಷಕರ ವ್ಯಕ್ತಿತ್ವ ನಿರ್ಮಾಣದಲ್ಲಿ ಶಿಕ್ಷಕ ತರಬೇತಿ ಸಂಸ್ಥೆಗಳ ಪಾತ್ರ ಮಹತ್ತರವಾಗಿದೆ ಎಂದು ಬೀದರ ವಿಶ್ವವಿದ್ಯಾಲಯದ ಪ್ರಭಾರಿ ಕುಲ ಸಚಿವರಾದ ಡಾ. ಪರಮೇಶ್ವರ ನಾಯಕ ಅವರು ಹೆಳಿದರು.

ಅವರು ಇತ್ತೀಚೆಗೆ ಹೈದರಾಬಾದ-ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧಿನದಲ್ಲಿ ನಡೆಯುತ್ತಿರುವ ಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ 2023 ನೇ ಸಾಲಿನ ವಿದ್ಯಾರ್ಥಿಗಳಿಗಾಗಿ ಸ್ವಾಗತ ಸಮಾರಂಭ ಹಾಗೂ ಪ್ರತಿಭಾ ಪರಿಚಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡುತ್ತಿದ್ದರು.

ಶಿಕ್ಷಣ ಕ್ಷೇತ್ರದಲ್ಲಿ ಅಪಾರ ಬದಲಾವಣೆಯಾಗುತ್ತಿದೆ. ಇಂದಿನ ಈ ದಿನಮಾನಗಳಲ್ಲಿ ಎಲ್ಲರಿಗೂ ಶಿಕ್ಷಣದ ಜೊತೆ ಜೊತೆಗೆ ಸಂಸ್ಕಾರದ ಅವಶ್ಯಕತೆ ಬಹಳಷ್ಟಿದೆ. ಈ ನಿಟ್ಟಿನಲ್ಲಿ ಸರ್ಕಾರಗಳು ಕೈಗೊಳ್ಳುತ್ತಿರುವ ಕಾರ್ಯಗಳು ಪ್ರಶÀಂಸನೀಯ ಹಾಗೂ ಶ್ಲಾಘನೀಯವಾಗಿದೆ ಎಂದು ಹೇಳಿದÀರು.

ಶಿಕ್ಷಕ ಒಬ್ಬ ಮಾದರಿ ವ್ಯಕ್ತಿಯಾಗಿ ವಿದ್ಯಾರ್ಥಿಗಳ ಜೀವನ ಹಾಗೂ ಭವಿಷ್ಯ ನಿರ್ಮಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ತರಬೇತಿ ಪಡೆದು ಓರ್ವ ಆದರ್ಶ ಶಿಕ್ಷಕನಾಗಿ ರೂಪಗೊಳ್ಳಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ ನಗರದ ಬಿವಿಬಿ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಪಿ.ವಿ. ವಿಠ್ಠಲ ರೆಡ್ಡಿ ಅವರು ಮಾತನಾಡುತ್ತ, ಪರಿವರ್ತನೆ ಜಗದ ನಿಯಮ. ಇಂದಿನ ದಿನಗಳಲ್ಲಿ ಆಧುನಿಕ ಶಿಕ್ಷಣ ಪದ್ಧತಿ ಹಾಗೂ ಶಿಕ್ಷಣದಲ್ಲಿ ಮಹಿಳೆಯರು ಮೈಲಿಗಲ್ಲು ಸಾಧಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಮಲ್ಲಿಕಾರ್ಜುನ ಕನಕಟ್ಟೆ ಅವರು ಮಾತನಾಡುತ್ತ, ವಿದ್ಯಾರ್ಥಿಗಳಲ್ಲಿ ಧೈರ್ಯ ಆತ್ಮವಿಶ್ವಾಸ ಹಾಗೂ ವಿಷಯ ಪ್ರಭುತ್ವ ಮತ್ತು ಉತ್ತಮ ವ್ಯಕ್ತಿತ್ವ ನಿರ್ಮಾಣಕ್ಕೆ ಶಿಕ್ಷಕರು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ಪ್ರಾರಂಭದಲ್ಲಿ ಮಮಿತಾ ಸ್ವಾಗತಿಸಿದರು. ದಿಗಂಬರ ಹಾಗೂ ಸರಿತಾ ಕಾರ್ಯಕ್ರಮ ನಿರೂಪಿಸಿದರು. ಕೊನೆಯಲ್ಲಿ ದೀಪಿಕಾ ವಂದಿಸಿದರು.

ಕಾರ್ಯಕ್ರಮದಲ್ಲಿ ಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯದ ಬೋಧಕರು ಹಾಗೂ ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.