ಶಿಕ್ಷಕರ ಸಹಪಠ್ಯ ಚಟುವಟಿಕೆಗಳ ಉದ್ಘಾಟನೆ

ಬಾದಾಮಿ,ಡಿ.2: ಎಲ್ಲ ಶಿಕ್ಷಕರು ಸಹಪಠ್ಯ ಚಟುವಟಿಕೆಗಳಲ್ಲಿ ಭಾಗವಹಿಶುವ ಮೂಲಕ ತಾಲೂಕಿನ ಕೀರ್ತಿಯನ್ನು ರಾಜ್ಯಮಟ್ಟದವರೆಗೆ ಹೆಚ್ಚಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ವೈ.ಕುಂದರಗಿ ಹೇಳಿದರು.
ಅವರು ನಗರದ ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ 2023-24ನೇ ಸಾಲಿನ ಬಾದಾಮಿ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ಸಹಪಠ್ಯ ಚಟುವಟಿಕೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಬಾದಾಮಿ ತಾಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಸ್.ವಿ.ತೋಟಗೇರ , ಗುಳೇದಗುಡ್ಡ ತಾಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ವಿ.ಡಿ.ವೈಕುಂಠೆ, ಪ್ರೌಢ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಕೆ. ಚಿಮ್ಮಲ, ಉಪಾಧ್ಯಕ್ಷ ಉಜ್ವಲ ಬಸರಿ, ನಿರ್ದೇಶಕರಾದ ಎಚ್.ಎಂ. ಯತ್ನಟ್ಟಿ, ಶಿವು ಕಳಕಾಪೂರ, ಎ.ಪಿ.ಮೇಟಿ, ಎಸ್.ಎಸ್.ಪಟ್ಟಣಶೆಟ್ಟಿ, ಶಿಕ್ಷಣ ಸಂಯೋಜಕ ವಿ.ಎಸ್. ಹಿರೇಮಠ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಇನ್ಮೋರ್ವ ಶಿಕ್ಷಣ ಸಂಯೋಜಕ ಹನುಮಂತರಾಜು ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಸಹಶಿಕ್ಷಕ ಎಸ್.ವೈ. ಮಡಿವಾಳರ ನಿರೂಪಿಸಿದರು. ವಿ.ಎಸ್.ಹಿರೇಮಠ ವಂದಿಸಿದರು. ಕಾರ್ಯಕ್ರಮದಲ್ಲಿ ಬಾದಾಮಿ ತಾಲೂಕಿನ ಎಲ್ಲ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದರು.