ಶಿಕ್ಷಕ ವೃತ್ತಿ ಅತಿ ಶ್ರೇಷ್ಠವಾದದು:ಸಜ್ಜನಶೆಟ್ಟಿ

ಸೈದಾಪುರ:ನ.21:ಶಿಕ್ಷಣ ವೃತ್ತಿ ಅಂತಂತ್ಯ ಶ್ರೇಷ್ಠವಾದದು. ಇದರ ಮಹತ್ವ ಹೆಚ್ಚಾಗಲು ಸದಾ ನಾವು ನಿರಂತರ ಕಲಿಕೆಯಲ್ಲಿ ತೊಡಗಿಸಿಕೊಳ್ಳಬೇಕು. ಸ್ವಚ್ಛ ಮನಸ್ಸುಳ್ಳವರು ನಾವಾಗಿರಬೇಕು ಎಂದು ವಿದ್ಯಾ ವರ್ಧಕ ವಾಣಿಜ್ಯ ಮತ್ತು ವಿಜ್ಞಾನ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಹಂಪಣ್ಣ ಸಜ್ಜನಶೆಟ್ಟಿ ಅಭಿಪ್ರಾಯಪಟ್ಟರು.

ಪಟ್ಟಣದ ವಿದ್ಯಾ ವರ್ಧಕ ಡಿ.ಎಲ್.ಎಡ್ ಕಾಲೇಜಿನ ಪ್ರಥಮ ವರ್ಷದ ಪ್ರಶಿಕ್ಷಣಾರ್ಥಿಗಳಿಗೆ ಹಮ್ಮಿಕೊಂಡ ಸ್ವಾಗತ ಸಮಾರಂಭ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಉತ್ತಮ ಕೌಶಲದೊಂದಿಗೆ ಶೈಕ್ಷಣಿಕ ಅಭಿವೃದ್ಧಿಗೆ ಪ್ರಯತ್ನ ಮಾಡಿದಾಗ ನಮ್ಮ ಮಹತ್ವ ಹೆಚ್ಚಾಗುತ್ತದೆ ಎಂದು ಹೇಳಿದರು.

ಮುಖ್ಯಗುರು ಲಿಂಗಾರೆಡ್ಡಿ ನಾಯಕ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ನಮ್ಮ ಸಂಸ್ಥೆ ಈ ಭಾಗದ ಸಾಮಾಜಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಸೇವಾ ಮನೋಭಾವನೆಯೊಂದಿಗೆ ಕಾರ್ಯನಿರ್ವಹಿಸುತ್ತಿದೆ. ಅಲ್ಲದೆ ಅನುವಭವಿ ಉಪನ್ಯಾಸಕರಿದ್ದೂ ಇದರ ಸದುಪಯೋಗ ಪಡೆದುಕೊಂಡು ಉತ್ತಮ ಸಾಧನೆ ಪ್ರಶಿಣಾರ್ಥಿಗಳದಾಗಬೇಕು ಎಂದು ಕಿವಿ ಮಾತುಗಳನ್ನು ಹೇಳಿದರು.

ಕರಬಸಯ್ಯ ದಂಡಿಗಿಮಠ ಅಧ್ಯಕ್ಷತೆ ವಹಿಸಿದ್ದರು. ಪ್ರಾಂಶುಪಾಲ ಜಿ.ಎಂ.ಗುರುಪ್ರಸಾದ, ಪ್ರಶಿಕ್ಷಣಾರ್ಥಿಗಳಾದ ಶಾರದಾ, ರಹೀಮ, ರಾಚಮ್ಮ, ಮಹೇಶ್ವರಿ ಮಾತನಾಡಿದರು. ಉಪನ್ಯಾಸಕರಾದ ಸಾಬಯ್ಯ ರಾಯಪ್ಪನೋರ, ಹಣಮರೆಡ್ಡಿ ಮೋಟ್ನಳ್ಳಿ, ಆನಂದ ಪಾಟೀಲ ಕೊಂಡಾಪೂರ, ಪ್ರಥಮ ಹಾಗೂ ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳು ಸೇರಿದಂತೆ ಇತರರಿದ್ದರು. ಪ್ರಶಿಕ್ಷಣಾರ್ಥಿ ಗೌರಿಶ್ರೀ ಸ್ವಾಗತಿಸಿದರು. ಪವಿತ್ರ ನಿರೂಪಿಸಿದರು. ನಾರಾಯಣ ವಂದಿಸಿದರು.