ಶಿಕ್ಷಣದಿಂದ ಮಾತ್ರ ಉನ್ನತ ಸ್ಥಾನ

ಬೀದರ್: ಸೆ.15:ಶಿಕ್ಷಣದಿಂದ ಮಾತ್ರ ಜೀವನದಲ್ಲಿ ಉನ್ನತ ಸ್ಥಾನ ಪಡೆಯಬಹುದಾಗಿದೆ ಎಂದು ಬೀದರ್ ಉಪ ವಿಭಾಗಾಧಿಕಾರಿ ಲವೀಶ್ ಓರ್ಡಿಯಾ ನುಡಿದರು.
ಬೀದರ್ ತಾಲ್ಲೂಕಿನ ಹಮಿಲಾಪುರದ ವಿ.ಎಂ. ರಾಂಪುರೆ ಆಂಗ್ಲ ಮಾಧ್ಯಮ ಪಬ್ಲಿಕ್ ಶಾಲೆಯಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಗ್ರಾಮೀಣ ಮಟ್ಟದಲ್ಲಿ ಶಾಲೆ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುತ್ತಿರುವುದು ಶ್ಲಾಘನೀಯ ಎಂದರು.
ಶಾಲೆಯ ಅಧ್ಯಕ್ಷ ಮಹೇಶ ಎಸ್. ರಾಂಪುರೆ ಮಾತನಾಡಿದರು. ವಿದ್ಯಾರ್ಥಿಗಳು ಜ್ಯೋತಿಬಾ ಫುಲೆ, ಸಾವಿತ್ರಿಬಾಯಿ ಫುಲೆ ಹಾಗೂ ರಾಧಾಕೃಷ್ಣನ್ ವೇಷ ತೊಟ್ಟು ಸಂಭ್ರಮಿಸಿದರು. ಮಹಾ ಪುರುಷರ ಜೀವನ ಚರಿತ್ರೆ ಮೇಲೆ ಬೆಳಕು ಕೂಡ ಚೆಲ್ಲಿದರು.
ಶಾಲೆಯ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ಪಾಲಕರು ಪಾಲ್ಗೊಂಡಿದ್ದರು.