ಶಿಕ್ಷಣದ ಅಭಿವೃದ್ಧಿಗೆ  ಶೇಕಡ 30ರಷ್ಟು ಅನುದಾನಕ್ಕೆ ಒತ್ತಾಯ


ಸಂಜೆವಾಣಿ ವಾರ್ತೆ
ಹಗರಿಬೊಮ್ಮನಹಳ್ಳಿ. ಫೆ.14 ರಾಜ್ಯ ಸರ್ಕಾರ ಬಜೆಟ್ ನಲ್ಲಿ ಶಿಕ್ಷಣದ ಅಭಿವೃದ್ಧಿಗೆ  ಶೇ 30 ರಷ್ಟು ಅನುದಾನ ಸೇರಿದಂತೆ ಕ್ಷೇತ್ರದ ಅಭಿವೃದ್ಧಿಗಾಗಿ  ಮೀಸಲಿರಿಸಿದ ಹಣವನ್ನು ಸಮರ್ಪಕ ಜಾರಿಗೊಳಿಸುವಂತೆ ಒತ್ತಾಯಿಸಿ  ಎಸ್ ಎಫ್.ಐ ತಾಲೂಕು ಸಮಿತಿ ನೇತೃತ್ವದಲ್ಲಿ  ಉಪ ತಹಶಿಲ್ದಾರರ ಶಿವಕುಮಾರ್ ಗೌಡ  ಮುಖಾಂತರ ಮುಖ್ಯ ಮಂತ್ರಿಗಳಿಗೆ ವಿದ್ಯಾರ್ಥಿಗಳು ಹಕ್ಕೊತ್ತಾಯಿಸಿ ಮನವಿ ಪತ್ರ ನೀಡಿದರು,
 ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಎಸ್ ಎಫ್ ಐ  ಸಂಘಟನೆಯ ತಾಲೂಕ ಅಧ್ಯಕ್ಷ ಜಯ ಸೂರ್ಯ  ಮಾತನಾಡಿ ರಾಜ್ಯ ಸರ್ಕಾರ ಶಿಕ್ಷಣಕ್ಕಾಗಿ ಸಾಕಷ್ಟು ಹಣ ಖರ್ಚು ಮಾಡುತ್ತಿದ್ದರು. ಸರಿಯಾದ ಕ್ರಮದಲ್ಲಿ ದೊರೆಯುತ್ತಿಲ್ಲ. ಕ್ಷೇತ್ರದಲ್ಲಿ ಈಗಾಗಲೇ ಬೇಡಿಕೆಗಳನ್ನು ತಿಳಿಸಲಾಗಿದೆ.
. ಪಟ್ಟಣದಲ್ಲಿ  ಸ್ನಾತಕೋತ್ತರ ಕಾಲೇಜು, ಇಂಜಿನಿಯರಿಂಗ್ ಕಾಲೇಜು, ವೈದ್ಯಕೀಯ ಕಾಲೇಜು ಗಳನ್ನು ಆರಂಭಿಸಬೇಕು. ಜಿಲ್ಲೆಯಾದ್ಯಂತ ಪ್ರತಿ ತಾಲೂಕಿಗೂ ಸರ್ಕಾರಿ ಡಿಪ್ಲೋಮಾ ಕಾಲೇಜು, ಸರ್ಕಾರಿ ಐಟಿಐ ಕಾಲೇಜು ಸರ್ಕಾರಿ ಜಿಟಿಟಿಸಿ ಕಾಲೇಜುಗಳನ್ನು ಮಂಜೂರು ಮಾಡಬೇಕು.. ಜಿಲ್ಲೆಯಾದ್ಯಂತ ಇರುವ ಸರ್ಕಾರಿ ಐಟಿಐ ಕಾಲೇಜಿಗೆ ಸ್ವಂತ ಕಟ್ಟಡ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು. ಜಿಲ್ಲೆಯಾದ್ಯಂತ ಇರುವ ಸರಕಾರಿ ವಸತಿ ನಿಲಯಗಳನ್ನು ಬಲಪಡಿಸಬೇಕು. ಹಾಗೂ ಹೆಚ್ಚುವರಿ ಹಾಸ್ಟೆಲ್ ಮಂಜೂರು ಮಾಡಬೇಕು.
ಪ್ರತಿ ಹಳ್ಳಿಗಳಿಗು ಸಮರ್ಪಕ ಬಸ್ ಸೌಲಭ್ಯ ಕಲ್ಪಿಸಬೇಕು ಮತ್ತು ಎಲ್ಲಾ ವಿದ್ಯಾರ್ಥಿಗಳಿಗು ಉಚಿತ ಬಸ್ ಪಾಸ್ ನೀಡುವುದನ್ನು ವಿಸ್ತರಿಸಬೇಕು
 ರಾಜ್ಯ ಸರಕಾರ ತನ್ನ ಬಜೆಟ್‌ನಲ್ಲಿ ಶಿಕ್ಷಣಕ್ಕಾಗಿ ಶೇ.30ರಷ್ಟು ಹಣ ಮೀಸಲಿಡಬೇಕು.
ಎಂದು ಒತ್ತಾಯಿಸಿದರು ಈ ಸಂದರ್ಭದಲ್ಲಿ ಎಸ್ಎಫ್ಐ ತಾಲೂಕು ಸಮಿತಿ ಸದಸ್ಯರಾದ ಮಹಂತೇಶ್ , ತಿಪ್ಪೇಸ್ವಾಮಿ, ಆಕಾಶ್ , ಚಿನ್ನು , ರಾಜ ,ಶ್ರೀಧರ್ , ಪ್ರವೀಣ್, ಪುನೀತ್ , ವಿಷ್ಣು , ಮೋಹನ್ , ಹರೀಶ್ಇದ್ದರು .