
ಸಂಜೆವಾಣಿ ವಾರ್ತೆ
ಚಿತ್ರದುರ್ಗ.ನ.೪: ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ಆದ್ಯತೆ ನೀಡಬೇಕು ಎಂದು ಸರಸ್ವತಿ ಕಾನೂನು ಕಾಲೇಜಿನ ಪ್ರಾಂಶುಪಾಲೆ ಡಾ.ಎಂ.ಎಸ್.ಸುಧಾದೇವಿ ಹೇಳಿದರು.ನಗರದ ತರಾಸು ರಂಗಮಂದಿರದಲ್ಲಿ ದಾವಣಗೆರೆ ವಿಶ್ವವಿದ್ಯಾಲಯ, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಐ.ಕ್ಯೂ.ಎ.ಸಿ ಸಹಯೋಗದಲ್ಲಿ 2023-24ನೇ ಸಾಲಿನ ಪಠ್ಯೇತರ ಕಾರ್ಯಚಟುವಟಿಕೆಗಳ ಉದ್ಘಾಟನಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.ಶಿಕ್ಷಕರು ಉಪನ್ಯಾಸ ನೀಡುವುದರ ಜೊತೆಗೆ ಹೆಣ್ಣು ಮಕ್ಕಳು ಯಾವ ರೀತಿಯಾಗಿ ಸಮಾಜದಲ್ಲಿ ಬದುಕಬೇಕು ಎಂಬ ನೀತಿ ಪಾಠ ಹೇಳಬೇಕು. ವಿದ್ಯಾರ್ಥಿಗಳು ಸರ್ಕಾರದ ವಿವಿಧ ಸೌಲಭ್ಯ ಸದುಪಯೋಗ ಪಡೆದುಕೊಳ್ಳಬೇಕು. ಉತ್ತಮವಾದ ವಿದ್ಯಾರ್ಥಿಯಾಗಿ ಗುರುತಿಸಿಕೊಂಡು ಕಾಲೇಜಿಗೆ ಹಾಗೂ ತಂದೆ-ತಾಯಿಗಳಿಗೆ ಕೀರ್ತಿ ತರಬೇಕು ಎಂದರು.
ಸಮಾಜವನ್ನು ಬದಲಾವಣೆ ಮಾಡಬೇಕು ಅಂದರೆ ಅದು ಶಿಕ್ಷಣದಿಂದ ಮಾತ್ರ ಸಾಧ್ಯ. ವಿವಿಧ ಕ್ಷೇತ್ರಗಳಲ್ಲಿ ಹೆಣ್ಣು ಮಕ್ಕಳು ಹೆಚ್ಚು ಸಾಧನೆ ಮಾಡಿದ್ದಾರೆ.ಅದೇ ರೀತಿಯಲ್ಲಿ ನೀವು ಮುಂದುವರೆಯುವಂತೆ ಸಲಹೆ ನೀಡಿದರು.