ಶಿಕ್ಷಣದ ಜೊತೆಗೆ ಆರೋಗ್ಯದ ಕಾಳಜಿ ವಹಿಸಿ


ಬಳ್ಳಾರಿ,ಆ.06: ಮಕ್ಕಳು ಶಾಲೆಯಲ್ಲಿ ಶಿಕ್ಷಣ ಪಡೆಯುವುದಲ್ಲದೇ ಆರೋಗ್ಯ ಶಿಕ್ಷಣ ಹೊಂದಬೇಕು. ಈ ಮೂಲಕ ವಿದ್ಯಾರ್ಥಿಗಳು ಎಲ್ಲಾ ವಿಷಯವನ್ನು ತಿಳಿದುಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಂಟುಬ ಕಲ್ಯಾಣ ಅಧಿಕಾರಿ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಗ್ರಾಮ ಪಂಚಾಯತಿಗಳ ಸಹಯೋಗದೊಂದಿಗೆ ನಗರದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ  ‘ಆರೋಗ್ಯ ಸಿಂಚನ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಶಾಲಾ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ಆರೋಗ್ಯದ ಬಗ್ಗೆ ಹೆಚ್ಚು ಅರಿವು ಮತ್ತು ಜಾಗೃತಿ ಮೂಡಿಸಬೇಕು ಎಂದರು.      
ಶಾಲಾ ಮಕ್ಕಳಿಗೆ ಡೆಂಗ್ಯು, ಕ್ಷಯರೋಗ, ಕುಷ್ಠರೋಗ, ಬಾಲ್ಯವಿವಾಹ, ಋತುಚಕ್ರ ನಿರ್ವಹಣೆ, ಕೈತೊಳೆಯುವ ವಿಧಾನಗಳು, ತ್ಯಾಜ್ಯ ನಿರ್ವಹಣೆಗಳ ಮಾಹಿತಿ ಪ್ರತಿಯೊಬ್ಬರೂ ಪಡೆಯಬೇಕು. ಈ ಅಭಿಯಾನವು ಇಂದು ಜಿಲ್ಲೆಯಾದ್ಯಂತ ಆರಂಭಗೊಂಡಿದ್ದು ಎಲ್ಲರೂ ಸೇರಿ ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.
ಪ್ರತಿದಿನ ಊಟದ ಮೊದಲು ಶೌಚದ ನಂತರ  ಕೈಗಳನ್ನು ಸಾಬೂನು ಮತ್ತು ನೀರಿನಿಂದ ತೊಳೆಯುವುದನ್ನು ಅಭ್ಯಾಸ ಮಾಡಿಕೊಂಡರೆ ಶೇ.80 ರೋಗಗಳು ಬರುವುದಿಲ್ಲ ಎಂದು ಬಳ್ಳಾರಿ ಪೂರ್ವ ಕ್ಷೇತ್ರ ಶಿಕ್ಷಣಾಧಿಕಾರಿ ನೈಯಮೂರ್ ರೆಹಮಾನ್ ಅವರು ತಿಳಿಸಿದರು.
ಇದೇ ಸಂದರ್ಭದಲ್ಲಿ ಪರಿಣಾಮಕಾರಿ ಇಂದ್ರಧನುಷ್ ಲಸಿಕಾ ಅಭಿಯಾನ 5.0 ಹಾಗೂ ಸ್ತನ್ಯಪಾನ ಸಪ್ತಾಹ ಕುರಿತ ಭಿತ್ತಿ ಪತ್ರ ಬಿಡುಗಡೆ ಮಾಡಲಾಯಿತು.
ಈ ಸಂಭರ್ದದಲ್ಲಿ ಮಹಾನಗರ ಪಾಲಿಕೆ ಮಹಾಪೌರಾದ ಡಿ.ತ್ರಿವೇಣಿ, ಪಾಲಿಕೆ ಸದಸ್ಯರು ಕೆ.ಈರಮ್ಮ ಸುರೇಂದ್ರ, ಪದ್ಮ ರೋಜ, ಜಿಲ್ಲಾ ಶಸ್ತ್ರ ಚಿಕಿತ್ಸಕ ತಾಲ್ಲೂಕ ಆರೋಗ್ಯಾಧಿಕಾರಿ ಈಸಿಓ ಗುಳ್ಳೆಪ್ಪ, ಕರ್ನಾಟಕ ಪಬ್ಲಿಕ ಶಾಲೆ ಉಪಪ್ರಾಚಾರ್ಯರು ಜಾಯ್ ದೆ ಬೋರಾ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್ ದಾಸಪ್ಪನವರ ಸೇರಿದಂತೆ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.