ಶಿಕ್ಷಣದ ಜೊತೆಗೆ ಕ್ರೀಡೆಯಲ್ಲಿ ವಿದ್ಯಾರ್ಥಿಗಳು ತೊಡಗಿಕೊಳ್ಳಬೇಕು – ಶಾಸಕರು

ಕಲ್ಲೂರು ವಲಯ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ
ಸಿರವಾರ.ಜು.೨೧- ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಣದ ಜೊತೆಗೆ ಕಲೆ, ಸಾಹಿತ್ಯ, ಕ್ರೀಡೆಗಳನ್ನು ವಿದ್ಯಾರ್ಥಿಗಳ ಮೈಗೂಡಿಸಿಕೊಳ್ಳಬೇಕು. ವಿದ್ಯಾರ್ಥಿ ಜೀವನ ದುಷ್ಚಟಗಳಿಂದ ಕೂಡಿರದೆ ಚಟುವಟಿಕೆಯಿಂದ ಕೂಡಿರಬೇಕು ಎಂದು ಮಾನ್ವಿ ಶಾಸಕರಾದ ರಾಜಾ ವೆಂಕಟಪ್ಪ ನಾಯಕ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.
ತಾಲೂಕಿನ ಕಲ್ಲೂರು ಗ್ರಾಮದಲ್ಲಿ ಇಂದು ಬೆಳಗ್ಗೆ ೨೦೨೨-೨೩ ಸಾಲಿನ ಜಿ. ಪಂ. ರಾಯಚೂರು, ಸಾರ್ವಜನಿಕ ಶಿಕ್ಷಣ ಇಲಾಖೆ ರಾಯಚೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಸಿರವಾರ/ಮಾನ್ವಿ, ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕಲ್ಲೂರು ಇವರುಗಳ ಸಂಯುಕ್ತಾಶ್ರಯದಲ್ಲಿ ಕಲ್ಲೂರು ವಲಯ ಮಟ್ಟದ ಕ್ರೀಡಾಕೂಟದ ಕ್ರೀಡಾ ಧ್ವಜಾರೋಹಣ ನೆರವೇರಿಸಿ, ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಿತ್ಯ ನಾವು ಆಟಗಳಲ್ಲಿ ತೊಡಗಿಕೊಂಡು.
ದೈಹಿಕ ಶಿಕ್ಷಕರ ಮಾರ್ಗದರ್ಶನದಲ್ಲಿ ನಡೆದು ಕ್ರೀಡಾಕೂಟಗಳಲ್ಲಿ ಪಾಲ್ಗೊಂಡರೆ ಜಿಲ್ಲೆ- ರಾಜ್ಯ ಮಟ್ಟದವರೆಗೂ ತಲುಪಬಹುದು. ಪಠ್ಯದ ಜೊತೆ ದೈಹಿಕ ಶಿಕ್ಷಣ, ಕ್ರೀಡಾ ಚಟುವಟಿಕೆ ಸಹ ವಿದ್ಯಾರ್ಥಿಗಳ ಬೆಳವಣಿಗೆಗೆ ಅವಶ್ಯಕವಾಗಿದೆ.ಪ್ರತಿಯೊಬ್ಬ ವಿದ್ಯಾರ್ಥಿಯೂ ಸಕ್ರಿಯವಾಗಿ ಕ್ರೀಡಾಕೂಟದಲ್ಲಿ ಭಾಗವಹಿಸಬೇಕು ಇದರಿಂದ ಮಾನಸಿಗೆ ಉಲ್ಲಾಸ ದೊರೆತು ಪಾಠ, ಪಠ್ಯದ ಕಡೆ ಹೆಚ್ಚು ಒಲವು ತೋರಲು ಸಾಧ್ಯವಾಗುತ್ತದೆ. ಮಕ್ಕಳು ಓದಿನೊಂದಿಗೆ ಸ್ವಲ್ಪ ಸಮಯವನ್ನು ಕ್ರೀಡೆಗೂ ಮೀಸಲಿಡಬೇಕು.
ಕಳೆದೆರಡು ವರ್ಷದಿಂದ ಕೊರೊನಾದಿಂದಾಗಿ ಯಾವುದೇ ಕ್ರೀಡೆಗಳು ನಡೆಸಲಾಗಿಲ್ಲ. ಹೀಗಾಗಿ ವಿದ್ಯಾರ್ಥಿಗಳು ಆಟೋಟ ಮರೆ ತಂತೆ ಕಾಣುತ್ತಿದೆ. ಪಾಲಕರು, ಶಿಕ್ಷಕರು ಮಕ್ಕಳನ್ನ ಕ್ರೀಡೆಗಳಲ್ಲಿ ಭಾಗಿಯಾಗುವಂತೆ ನೋಡಿಕೊಳ್ಳಬೇಕು. ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ ದೊಡ್ಮನೆ ಪ್ರಾಸ್ತವಿಕವಾಗಿ ಮಾತನಾಡಿ, ಮಾನಸಿಕ ಶೈಕ್ಷಣಿಕ, ಆರ್ಥಿಕವಾಗಿ ಸಬಲರಾಗಲು ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ ಅವಶ್ಯಕವಾಗಿದೆ. ಸ್ಪರ್ಧೆಯಲ್ಲಿ ಭಾಗವಹಿಸುವುದು ಮುಖ್ಯ, ಗೆಲುವು ಸೋಲು ಸಮಾನವಾಗಿ ಸ್ವೀಕರಿಸಬೇಕು. ಎಲ್ಲಾ ವಿದ್ಯಾರ್ಥಿಗಳು ಉತ್ತಮವಾದ ಶಿಕ್ಷಣವನ್ನು ಪಡೆದುಕೊಂಡಾಗ ಮಾತ್ರ ವಿದ್ಯಾರ್ಥಿಗಳು ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತೆದೆ ಎಂದು ಸಲಹೆ ನೀಡಿದರು.
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಲ್ಲೇಶಪ್ಪ ಸಿರವಾರ ಅವರು ಮಾತನಾಡಿ ಶಾಸಕರು ಮಾನ್ವಿ ಕ್ಷೇತ್ರದ ವ್ಯಾಪ್ತಿಯಲ್ಲಿ ಶಾಲೆಗಳಿಗೆ, ಶೈಕ್ಷಣಿಕ ಕ್ಷೇತ್ರಕ್ಕೆ ನೀಡಿದ ಅನುದಾನ ಕುರಿತು ಮಾತನಾಡಿದರು. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತಾಲೂಕಿಗೆ ಅತೀ ಹೆಚ್ಚು ಅಂಕ ಪಡೆದ ಇಬ್ಬರು ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ – ಬ್ಯಾಗ್‌ನ್ನು ಶಾಸಕರು ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಶಿಕ್ಷಣ ಸಂಯೋಜನ ಅಧಿಕಾರಿ ಮಹೇಶ, ಕ್ಷೇತ್ರ ಸಂಪನ್ಮೂಲ ಅಧಿಕಾರಿ ಯೂನುಸ್ ಖಾನ್, ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಕೇಶವ, ಕಲ್ಲೂರು ವಲಯ ಸಂಪನ್ಮೂಲ ವ್ಯಕ್ತಿ ಪ್ರಶಾಂತ, ಮಾನ್ವಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಂಗಮೇಶ ಮುದೋಳ, ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕಲ್ಲೂರು ಮು. ಗು. ಮದುರಂಗಪ್ಪ, ರವಿಕುಮಾರ ಮಾಚನೂರು, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಖಲೀಲ್ ಖುರೇಸಿ ಮಾನ್ವಿ, ಜೆಡಿಎಸ್ ಮುಖಂಡ ಮೌಲಾಸಾಬ್ ಮಾನ್ವಿ, ಗೋಪಾಲ ನಾಯಕ ಹರವಿ, ಸೂಗೂರಯ್ಯ ಸ್ವಾಮಿ ಗಣದಿನ್ನಿ, ಗ್ರಾಮ ಪಂಚಾಯತ್ ಅಧ್ಯಕ್ಷರ ಪತಿ ಸೋಮಪ್ಪ ನಾಯಕ, ರಾಜಶೇ ಖರ್ ಪಾಟೀಲ್, ಬಸವರಾಜ, ಹೊನ್ನಪ್ಪ, ದೈಹಿಕ ಶಿಕ್ಷಕರು, ಲಕ್ಶ್ಮಣ, ಡೇವಿಡ್, ಯೇಸಪ್ಪ, ಹನುಮಂತ ಭೋವಿ ಸೇರಿದಂತೆ ವಿವಿಧ ಶಾಲೆಯ ಶಿಕ್ಷಕರು ವಿದ್ಯಾರ್ಥಿಗಳು ಇದ್ದರು.