ಶಿಕ್ಷಣವಂತರಾದಾಗ ಮಾತ್ರ ಹಕ್ಕು ಪಡೆಯಲು ಸಾಧ್ಯ

ಸಂಜೆವಾಣಿ ವಾರ್ತೆ

ದಾವಣಗೆರೆ.ಡಿ.20; ಎಲ್ಲರೂ ಶಿಕ್ಷಣವಂತರಾದಾಗ ಮಾತ್ರ ನಮ್ಮ ಹಕ್ಕು ಪಡೆಯಲು ಸಾಧ್ಯವಾಗಲಿದೆ ಎಂದು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಕಿವಿಮಾತು ಹೇಳಿದರು.ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ಹಾಗೂ ತಾಲೂಕಿನ ಕರಿಲಕ್ಕೇನಹಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಪುತ್ಥಳಿ ಅನಾವರಣ ಹಾಗೂ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಡಾ.ಬಿ.ಆರ್.ಅಂಬೇಡ್ಕರ್ ರಚಿಸಿದ ಸಂವಿಧಾನದAತೆ ಎಲ್ಲರೂ ಶಿಕ್ಷಣವಂತರಾಗಿ ಸಂಘಟಿತ ಹೋರಾಟದೊಂದಿಗೆ ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯವಾಗಿ ಬೆಳೆಯಬೇಕು ಎಂದು ಸಲಹೆ ನೀಡಿದರು.ಪುತ್ಥಳಿ ಅನಾವರಣದ ಕನಸು ಬಹುದಿನಗಳ ನಂತರ ನನಸಾಗಿದೆ. ವಾಲ್ಮೀಕಿ ಅವರ ತತ್ವಾದರ್ಶವನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಂಡು ಎಲ್ಲ ಸಮುದಾಯದವರೊಂದಿಗೆ ಸಹೋದರತ್ವ ಭಾವದಿಂದ ಬಾಳಬೇಕು. ಈ ನಿಟ್ಟಿನಲ್ಲಿ ವಾಲ್ಮೀಕಿ ಗುರುಪೀಠದ ಜಗದ್ಗುರುಗಳು ಸಮಾಜವನ್ನು ಸಂಘಟಿಸುವ ಮೂಲಕ ಸಮಾಜವನ್ನು ಸರಿದಾರಿಗೆ ತರುವ ಕೆಲಸ ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ವರ್ಗದವರಿಗೆ ಸಾಕಷ್ಟು ಸೌಲಭ್ಯಗಳನ್ನು ಕೊಟ್ಟಿದೆ. ಇವುಗಳನ್ನು ಸದುಪಯೋಗ ಮಾಡಿಕೊಳ್ಳಬೇಕು.  ಪೋಷಕರು ಮಕ್ಕಳಿಗೆ ಒಳ್ಳೆಯ ಶಿಕ್ಷಣ ಕೊಡಿಸಿ ಸಮಾಜದ ಆಸ್ತಿಯನ್ನಾಗಿ ಮಾಡಬೇಕು. ಜೊತೆಗೆ ಒಳ್ಳೆಯ ಸಂಸ್ಕಾರ ಕೊಡಬೇಕೆಂದು ಕಿವಿಮಾತು ಹೇಳಿದರು.ಸಾನ್ನಿಧ್ಯ ವಹಿಸಿ ಮಾತನಾಡಿದ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಜಗದ್ಗುರು ಶ್ರೀಪ್ರಸನ್ನಾನಂದಪುರಿ ಸ್ವಾಮೀಜಿ, ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ ಸಮಾಜದ ಸತ್ಪçಜೆಗಳನ್ನಾಗಿ ಮಾಡಿ ಉನ್ನತ ಹುದ್ದೆಗಳಿಗೆ ಅಲಂಕರಿಸುವಂತೆ ಮಾಡಬೇಕು. ಜೊತೆಗೆ ಚನ್ನಗಿರಿ ತಾಲೂಕಿನ ಹೊದಿಗೆರೆ ಗ್ರಾಮದಲ್ಲಿ ಶಿವಾಜಿ ತಂದೆಯವರ ಸಮಾಧಿಯನ್ನು ಸ್ಮಾರಕ ಮಾಡಿದಂತೆ ಇಲ್ಲಿ ಕೂಡ ನೀವು ವಾಲ್ಮೀಕಿ ಪುತ್ಥಳಿ ಅನಾವರಣಗೊಳಿಸಿದ್ದೀರಿ. ಸಾಲದು, ಇಲ್ಲಿ ಸುಸಜ್ಜಿತ ಪಾರ್ಕ್ ನಿರ್ಮಿಸುವ ಮೂಲಕ ಪ್ರೇಕ್ಷಣಿಯ ಸ್ಥಳವನ್ನಾಗಿ ಮಾಡಬೇಕೆಂದು ಸಲಹೆ ನೀಡಿದರು.