ಶಿಕ್ಷಣ, ಆರೋಗ್ಯ ಕ್ಷೇತ್ರದ ಪ್ರಗತಿಗೆ ಹೆಚ್ಚು ಒತ್ತು :ಸಚಿವ ಈಶ್ವರ ಬಿ.ಖಂಡ್ರೆ

ಬೀದರ, ಜು.26: ಜಿಲ್ಲೆಯಲ್ಲಿ ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರದ ಪ್ರಗತಿಗೆ ಹೆಚ್ಚು ಒತ್ತು ನೀಡಲಾಗುವುದು ಎಂದು ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ ಸಚಿವರು ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ. ಖಂಡ್ರೆ ಹೇಳಿದರು.

  ಅವರು ಮಂಗಳವಾರ ಬೀದರ ನಗರದ ಅಂಬೇಡ್ಕರ ವೃತ್ತದ ಹತ್ತಿರದ ಸರ್ಕಾರಿ ಅಥಿತಿ ಗೃಹದ ಆವರಣದಲ್ಲಿರುವ ಜಿಲ್ಲಾ ಉಸ್ತುವಾರಿ ಸಚಿವರ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದರು.
  ಸಾರ್ವಜನಿಕರ ಕೊಂದುಕೊರತೆಯ ಅವಹಾಲು ಸ್ವೀಕರಿಸಿ ಪರಿಹಾರಿ ಒದಗಿಸುವ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕಛೇರಿಯನ್ನು ಇಲ್ಲಿ ಆರಂಭಿಸಲಾಗಿದೆ ಜಿಲ್ಲೆಯ ಜನರು ಇದರ ಸದಪಯೋಗ ಪಡೆದುಕೊಳ್ಳಬೇಕು. ಈ ಕಛೇರಿಯಲ್ಲಿ ಒಬ್ಬ ಸಹಾಯಕ ಸಿಬ್ಬಂದಿಯನ್ನು ನೇಮಿಸುವಂತೆ ಜಿಲ್ಲಾಧಿಕಾರಿಗಳಿಗೆ ತಿಳಿಸಿದ್ದೆನೆ. ಸಾರ್ವಜನಿಕರ ದೂರುಗಳಿಗೆ ಸ್ಥಳದಲ್ಲಿ ಪರಿಹಾರ ಒದಗಿಸಲಾಗುವು ಕಾನೂನುನಾತ್ಮಕ ಸಮಸ್ಯೆಗಳಿದ್ದರೆ ಜಿಲ್ಲಾಡಳಿತ ಹಾಗೂ ಸರ್ಕಾರದ ಗಮನಕ್ಕೆ ತಂದು ಪರಿಹಾರಿ ಒದಗಿಸಲಾಗುವುದು ಎಂದು ಹೇಳಿದರು.
   ಕಳೆದ ಬಾರಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಲ್ಲಿದ್ದ 3 ಸಾವಿರ ಕೋಟಿ ಅನುದಾನದಲ್ಲಿ ಶೇ.20 ರಷ್ಟು ಮಾತ್ರ ವಿನಿಯೋಗವಾಗಿದೆ ಆದರಿಂದ ಪ್ರಸಕ್ತ ಸಾಲಿನಲ್ಲಿ ಕೆಕೆಆರ್‍ಡಿಬಿಯಲ್ಲಿರುವ 5 ಸಾವಿರ ಕೋಟಿ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಲಾಗುವುದು. ಕಳೆದ ವರ್ಷ ಕೆಕೆಆರ್‍ಡಿಬಿ ಅನುಧಾನದಲ್ಲಿ ಆರಂಭವಾದ ಸಾಕಷ್ಟು ಯೋಜನೆಗಳು ನೆನೆಗುದಿಗೆ ಬಿದ್ದಿವೆ ಅವುಗಳನ್ನು ಪುನರಾರಂಭಿಸಲಾಗುವುದು ಎಂದರು.
 ಜಿಲ್ಲೆಯಲ್ಲಿ ಶಿಥೀಲಾವಸ್ಥೆಯಲ್ಲಿರುವ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಮತ್ತು ಜಿಲ್ಲಾ, ತಾಲ್ಲೂಕ ಹಾಗೂ ಗ್ರಾಮೀಣ ಭಾಗದಲ್ಲಿರುವ ಆಸ್ಪತ್ರೆಗೆ ಬೇಕಾಗುವ ಮೂಲಭೂತ ಸೌಕರ್ಯಕ್ಕೆ ಕೆಕೆಆರ್‍ಡಿಬಿಯಿಂದ ಅನುದಾನಕ್ಕಾಗಿ ಕ್ರೀಯಾ ಯೋಜನೆ ರೂಪಿಸಿ ಪ್ರಸ್ತಾವನೆ ಸಲ್ಲಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೆನೆ ಎಂದು ಹೇಳಿದರು.
 ಬೀದರ ಜಿಲ್ಲೆಯಲ್ಲಿ ಈ ಬಾರಿ ವಾಡಿಕೆಗಿಂತ ಶೇ.30 ರಷ್ಟು ಹೆಚ್ಚಿನ ಮಳೆಯಾಗಿದೆ ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ಮಳೆಯಾಗಿ ಪ್ರವಾಹ ಸಂಭಂವಿಸುವ ಮುನ್ಸೂಚನೆ ಇದ್ದು ಈ ಹಿನ್ನೆಲೆಯಲ್ಲಿ  ಈಗಾಗಲೇ ಜಿಲ್ಲಾಡಳಿತದಿಂದ ಪೂರ್ವ ಸಿದ್ದತೆ ಮಾಡಿಕೊಳ್ಳಲಾಗಿದೆ. ಪ್ರವಾಹ ಉಂಟಾಗಿ ಜೀವ ಹಾನಿ, ಮನೆ ಹಾನಿ, ರಸ್ತೆ ಹಾನಿ, ದನಕರುಗಳ ಹಾನಿ ಸೇರಿದಂತೆ ಇನ್ನಿತ್ತರ ಮೂಲಭೂತ ಸೌಕರ್ಯಗಳು ಹಾನಿಯಾದಲ್ಲಿ ತಕ್ಷಣ ಪರಿಹಾರ ಒದಗಿಸುವಂತೆ ಮತ್ತು ಬೆಳೆ ಹಾನಿ ಸಮೀಕ್ಷೆ ನಡೆಸುವಂತೆ  ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದೆನೆ ಎಂದರು.
ಗೃಹಲಕ್ಷ್ಮೀ ಯೋಜನೆಯಡಿ ಜಿಲ್ಲೆಯಿಂದ 1 ಲಕ್ಷ ಅರ್ಜಿ ಸಲ್ಲಿಕೆಯಾಗಿವೆ. ಅರ್ಜಿ ಸಲ್ಲಿಕೆ ಗ್ರಾಮ ಒನ್, ಕರ್ನಾಟಕ ಒನ್, ಹಾಗೂ ಬಾಪುಜೀ ಕೇಂದ್ರಗಳಲ್ಲಿ ಅವಕಾಶ ಕಲ್ಪಿಸಲಾಗಿದೆ ಅರ್ಜಿ ಸಲ್ಲಿಕೆಯು ಸಂಪೂರ್ಣವಾಗಿ ಉಚಿತವಾಗಿದ್ದು ಅರ್ಜಿ ಸಲ್ಲಿಸಲು ಯಾರಾದರು ಹಣ ಕೇಳಿದಲ್ಲಿ ಜಿಲ್ಲಾಧಿಕಾರಿ ಅಥವಾ ನನ್ನ ಗಮನಕ್ಕೆ ತಂದರೆ ಅವರ ವಿರುದ್ಧ ಕ್ರಮ ಜರುಗಿಸಲಾಗುವುದೆಂದರು.
   ಕೆ.ಟಿ.ಪಿ ಕಾಯ್ದೆ ಉಲ್ಲಂಘನೆ ಸಂಬಂಧಿಸಿದಂತೆ ಇಗಾಗಲೇ ಸಮಿತಿ ರಚಿಸಲಾಗಿದ್ದು ಸಮಿತಿಯ ವರದಿ ಬಂದ ನಂತರ

ವರದಿ ಆದರಿಸಿ ಅವರ ವಿರುದ್ಧ ಕ್ರಮ ವಹಿಸಲಾಗುವುದು ಎಂದ ಅವರು ಜಿಲ್ಲೆಯಲ್ಲಿ ಪರಿಸರ ಹಾನಿಗೆ ಕಾರಣರಾದವರು ಯಾರೇ ಇದ್ದರು ಸಹ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

ಈ ಸಂದರ್ಭದಲ್ಲಿ ಪೌರಾಡಳಿತ ಹಾಗೂ ಹಜ್ ಸಚಿವರಾದ ರಹೀಂ ಖಾನ್, ವಿಧಾನ ಪರಿಷತ ಸದಸ್ಯರುಗಳಾದ ಅರವಿಂದಕುಮಾರ ಅರಳಿ, ಭೀಮರಾವ ಪಾಟೀಲ್, ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ.ಎಂ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್, ಬೀದರ ಉಪ ಅರಣ್ಯ ಸಂರಕ್ಷಾಣಾಧಿಕಾರಿ ವಾನತಿ.ಎಂ.ಎಂ,ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.