ಶಿಕ್ಷಣ, ಕುಡಿಯುವ ನೀರು, ರಸ್ತೆ ಅಭಿವೃದ್ಧಿಗೆ ಮೊದಲ ಆದ್ಯತೆ -ಎನ್ ವೈ ಜಿ.

ಕೂಡ್ಲಿಗಿ.ಜೂ.10: – ಶಿಕ್ಷಣ, ಕುಡಿಯುವ ನೀರು, ರಸ್ತೆಗೆ ಮೊದಲ ಆದ್ಯತೆ ನೀಡಿದಂತೆ ಕೂಡ್ಲಿಗಿ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿದ್ದೇನೆ ಎಂದು ಶಾಸಕ ಎನ್.ವೈ.ಗೋಪಾಲಕೃಷ್ಣ ತಿಳಿಸಿದರು.
ಪಟ್ಟಣದ ಎರಡನೇ ವಾರ್ಡಿನಲ್ಲಿ 19 ಲಕ್ಷ ರೂ.ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡುತ್ತಾ ತಾಲೂಕಿನಲ್ಲಿ ಶೈಕ್ಷಣಿಕ ವಲಯಕ್ಕೆ ಆದ್ಯತೆ ನೀಡಿದ್ದು ಅನೇಕ ಗ್ರಾಮಗಳಲ್ಲಿ ಶಾಲಾ ಕಟ್ಟಡಗಳನ್ನು ನಿರ್ಮಿಸಲಾಗಿದೆ. ಇದರಂತೆ ಎಲ್ಲಾ ವಲಯಗಳ ಅಭಿವೃದ್ಧಿಗೂ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ತಹಸೀಲ್ದಾರ್ ಟಿ.ಜಗದೀಶ್, ತಾಪಂ ಇಒ ಜಿ.ಎಂ.ಬಸಣ್ಣ, ಪಂಚಾಯತ್ ರಾಜ್ ಇಲಾಖೆ ಎಇಇ ಮಲ್ಲಿಕಾರ್ಜುನ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಫಕ್ರುದ್ದೀನ್, ಪಿಡಬ್ಲ್ಯುಡಿ ಜೆಇ ನಾಗನಗೌಡ, ಶಾಸಕರ ಆಪ್ತ ಸಹಾಯಕ ಶ್ರೀಕಾಂತ್, ಬಿಜೆಪಿ ಕೂಡ್ಲಿಗಿ ಮಂಡಲ ಅಧ್ಯಕ್ಷ ಚೆನ್ನಪ್ಪ, ಮುಖಂಡರಾದ ಕೆ.ಎಚ್ .ವೀರನಗೌಡ, ಟಿ.ಜಿ.ಮಲ್ಲಿಕಾರ್ಜುನ ಗೌಡ, ಸೂರ್ಯ ಪಾಪಣ್ಣ, ಭೀಮೇಶ್, ಎಸ್.ದುರುಗೇಶ್, ಎಲ್.ಪವಿತ್ರಾ, ಸುನೀಲ್ ಗೌಡ, ಪಟ್ಟಣ ಪಂಚಾಯಿತಿ ಸದಸ್ಯರಾದ ಸಚಿನ್ ಕುಮಾರ್, ಚಂದ್ರು ಸೇರಿದಂತೆ ಇತರರಿದ್ದರು.