ಶಿಕ್ಷಣ ವಲಯಕ್ಕೆ ಬಂಪರ್ ಕೊಡುಗೆ: ಬಿರಾದಾರ

ಸಂಜೆವಾಣಿ ವಾರ್ತೆ,
ವಿಜಯಪುರ,ಫೆ.17:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ಶಿಕ್ಷಣ ವಲಯಕ್ಕೆ ಒಂದು ರೀತಿ ಬಂಪರ್ ಕೊಡುಗೆ ನೀಡಿದೆ ಎಂದು ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಶಿವರಾಜ ಬಿರಾದಾರ ಪ್ರತಿಕ್ರಿಯೆ ನೀಡಿದ್ದಾರೆ.
ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಪ್ರಾಥಮಿಕ,
ಪ್ರೌಢ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಉಚಿತ ವಿದ್ಯುತ್,ನೀರಿನ ಸೌಲಭ್ಯವನ್ನು ಒದಗಿಸಲು ನಿರ್ಧರಿಸಿರುವುದು ಶ್ಲಾಘನೀಯ ಎಂದಿದ್ದಾರೆ.
7ನೇ ವೇತನ ಆಯೋಗ ವರದಿ ಸ್ವೀಕರಿಸಿದ ನಂತರ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ. ಇದು ಒಂದು ರೀತಿಯ ಆಶಾದಾಯಕ ಬೆಳವಣಿಗೆಯಾಗಿದೆ ಎಂದು ತಿಳಿಸಿದ್ದಾರೆ.
ನೌಕರರ ಬಹು ದಿನಗಳ ಬೇಡಿಕೆಯಾದ ಎನ್‍ಪಿಎಸ್ ರದ್ದು ಆಗಬಹುದು ಎಂಬ ನಿರೀಕ್ಷೆ ಇತ್ತು, ಆದರೆ ಅದು ಈಡೇರಿಲ್ಲ ಎಂದು ಹೇಳಿದ್ದಾರೆ.